ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಪಾಟೀಲ
ರೋಣ: ಮಗುವಿನಲ್ಲಿನ ಸುಪ್ತ ಪ್ರತಿಭೆ ಹೊರಹಾಕಿ, ಉತ್ತಮ ವ್ಯಕ್ತಿತ್ವ ನಿರ್ಮಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖ ಎಂದು ಹಾವೇರಿ ಲೋಕಸಭೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಶಸ್ಸು ಹೊಂದಲು ಸತತ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಬೇಕು. ಶೈಕ್ಷಣಿಕ ಪ್ರಗತಿ ಹಾಗೂ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಅನೇಕ ಅಭಿವೃದ್ಧಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯೋಜನೆಗಳು ಫಲಕಾರಿಯಾಗಲು ಪಾಲಕ, ಶಿಕ್ಷಕ ಮತ್ತು ವಿದ್ಯಾರ್ಥಿಗಳು ಇಲ್ಲಿ ಪ್ರಮುಖರಾಗಿರುತ್ತಾರೆ. ಪ್ರಾಥಮಿಕ ಶಿಕ್ಷಣ ಹಂತವು ಮಗುವಿಗೆ ಭವಿಷ್ಯದ ಭದ್ರ ಬುನಾದಿಯಾಗಿದೆ. ಈ ಹಂತದಲ್ಲಿ ಮಗುವನ್ನು ಉತ್ತಮ ರೀತಿಯಲ್ಲಿ ತರಬೇತಿಗೊಳಿಸಬೇಕು ಎಂದರು.
ಬಿಇಓ ಕೆ.ವಿ. ಪಾಟೀಲ ಮಾತನಾಡಿ, ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರು ಅತಿ ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು. ಶಾಲೆಯಲ್ಲಿನ ಸ್ವಚ್ಛತೆ, ಕುಡಿವ ನೀರಿನ ಸೌಲಭ್ಯ, ಆಟದ ಮೈದಾನ, ಪೀಠೋಪಕರಣಗಳು, ಮಕ್ಕಳ ದಾಖಲಾತಿ ಹಾಜರಾತಿ ಕುರಿತು ಪರೀಕ್ಷಿಸಲು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇಂದಿನಿಂದಲೇ ತಾಲೂಕಿನಲ್ಲಿ 8 ಮಿಂಚಿನ ಸಂಚಾರ ತಂಡಗಳನ್ನು ರಚನೆ ಮಾಡಿದ್ದು, ಆ ತಂಡಗಳಲ್ಲಿ 32 ಜನ ಸದಸ್ಯರಿದ್ದು, ಪ್ರತಿ ತಂಡಕ್ಕೆ 15 ಶಾಲೆಗಳನ್ನು ನೀಡಲಾಗಿದೆ. ಆ ತಂಡವು ಅಲ್ಲಿನ ವ್ಯವಸ್ಥೆಯ ಕುರಿತು ಇಲಾಖೆಗೆ ಮಾಹಿತಿ ನೀಡುತ್ತದೆ. ಅದರ ಆಧಾರದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲೆಗೆ ಮೊದಲ ದಿನವೇ ಹಾಜರಾದ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಹಾಗೂ ಸಿಹಿ ಪದಾರ್ಥ ವಿತರಿಸಿ ಶುಭ ಕೋರಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಐ.ಎಸ್. ಪಾಟೀಲ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಎ.ಎನ್. ವಡಗೇರಿ, ಸಿ.ಬಿ. ರಡ್ಡೇರ, ಬಿ.ಎಂ. ಹಲಗಿ, ವೈ.ಡಿ. ಗಾಣಿಗೇರ ಹಾಗೂ ಶಾಲಾ ಶಿಕ್ಷಕ, ಶಿಕ್ಷಕಿಯರು ಹಾಗೂ ಶಿಕ್ಷಕೇತರ ವರ್ಗ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಬಿ.ಕೆ. ಜಾಲಿಹಾಳ ಸ್ವಾಗತಿದರು. ಶಿಕ್ಷಕಿ ವಿ.ಬಿ. ಕಾರಡಗಿಮಠ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

