ತರಬೇತಿಯಿಂದ ಪ್ರತಿಭೆ ಅನಾವರಣ
ಶಿಗ್ಗಾಂವಿ: ಪ್ರತಿಯೊಬ್ಬರಲ್ಲಿ ವಿಶೇಷ ಕೌಶಲ್ಯ ಅಡಗಿದ್ದು, ಅದಕ್ಕೆ ಸೂಕ್ತವಾದ ಅವಕಾಶ ನೀಡುವುದು ಪ್ರಮುಖವಾಗಿದೆ. ಅಂತಹ ಅವಕಾಶ ಸಂಘಗಳ ತರಬೇತಿಯಿಂದ ಪಡೆಯಲು ಸಾಧ್ಯವಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ತಡಸ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಜಲಾನಯನ ಅಭಿವೃದ್ಧಿ ಇಲಾಖೆ, ಪರಿಣಿತ ಸರ್ಕಾರೇತರ ಸಂಸ್ಥೆ, ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾಸಂಸ್ಥೆ, ಸ್ಫೂರ್ತಿ ಫೌಂಡೇಶನ, ನೀಡ್ಸ್ ಸಂಸ್ಥೆ ಆಶ್ರಯದಲ್ಲಿ ಸಮಗ್ರ ಜಲಾನಯನ ನಿರ್ವಹಣಾ ಕಾರ್ಯಕ್ರಮದಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ನಡೆದ ಉದ್ಯಮಶೀಲತಾ ಜಾಗೃತಿ ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನುದಾನ: ತಡಸ ಗ್ರಾಮದ ಸುತ್ತಲಿನ ಸುಮಾರು 15 ಗ್ರಾಮಗಳಲ್ಲಿ ಜಲಾನಯ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶವನ್ನು ಅಳವಡಿಸಲಾಗಿದೆ. ಅದಕ್ಕಾಗಿ ಸರ್ಕಾರ ಸುಮಾರು ರು. 6 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಹುಲಗೂರ ಗ್ರಾಮದಲ್ಲಿ ಸುಮಾರು ಮೂರು ಸಾವಿರ ಹೆಕ್ಟೇರ್ ಪ್ರದೇಶವನ್ನು ಜಲಾನಯನಕ್ಕೆ ಒಳಪಡಿಸಲಾಗಿದೆ ಎಂದರು.
ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ವೀರಭದ್ರಪ್ಪ ಮಾತನಾಡಿ, ಈ ತರಬೇತಿಯಲ್ಲಿ ಸುಮಾರು 35 ಸ್ವ-ಸಹಾಯ ಸಂಘಗಳ ಒಂಬೈನೂರು ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ತರಬೇತಿ ನೀಡುವ ಜತೆಗೆ ಸುಮಾರು ರು. 50 ಸಾವಿರ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಲ್ಲದೆ ಕೃಷಿ ಪರಿಕರಗಳ ಖರೀದಿಗೆ ನೆರವಾಗಲಿದೆ ಎಂದು ಹೇಳಿದರು. ವಿಪ ಸದಸ್ಯ ಸೋಮಣ್ಣ ಬೇವಿನಮರದ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ತಾಪಂ ಸದಸ್ಯ ನಿಂಗಪ್ಪ ಹರಿಜನ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮಾ ಸುರಟ್ಟಿ, ತಾಲೂಕು ಜಲಾನಯನ, ಕೃಷಿ ಅಧಿಕಾರಿ ಬಸನಗೌಡ ಪಾಟೀಲ, ಜಿಲ್ಲಾ ಜಲಾನಯನ ಅಧಿಕಾರಿ ಚಪ್ಪರಕಿ, ಜಿಲ್ಲಾ ತರಬೇತಿ ಸಂಯೋಜಕಿ ಕೆ. ದ್ರಾಕ್ಷಾಯಣಿ, ನೀಡ್ಸ್ ಸಂಸ್ಥೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಫ್. ಅಕ್ಕಿ, ಸ್ಫೂರ್ತಿ ಫೌಂಡೇಶನ್ ಮುಖ್ಯಸ್ಥ ಶಿವಾನಂದ ಆದವಾನಿಮಠ, ಜೈನ ಸಮಾಜದ ಅಧ್ಯಕ್ಷ ಸುಭಾಸ ನವಲೂರ, ಅಪ್ಪಣ್ಣ ಕೋಟಿ, ಪಿ.ಎಸ್. ಕೋಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

