ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ಅಗತ್ಯ: ಡಾ. ಪವಾರ
ಗದಗ: ಕಾಯಿಲೆ ಬಂದ ನಂತರ ಕಷ್ಟ ಪಡುವ ಬದಲು ಕಾಯಿಲೆಗಳು ಬರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಉತ್ತಮ ಎಂದು ಡಾ. ಜೆ.ಟಿ. ಪವಾರ ಹೇಳಿದರು.
ಈಚೆಗೆ ಅವರು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಮುಂಭಾಗದಲ್ಲಿನ ಚನ್ನೇಗೌಡರ ಓಣಿಯಲ್ಲಿ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದ ಅಡಿಯಲ್ಲಿ ಗದಗ-ಬೆಟಗೇರಿ ನಗರಸಭೆ ಹಾಗೂ ಹಾಗೂ ಸಂಸ್ಥೆಯ ಆಶ್ರಯದಲ್ಲಿ ಮಾಹಿತಿ ಶಿಕ್ಷಣ ಮತ್ತು ಸಂವಹನ(ಐಇಸಿ) ತರಬೇತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯದ ದಿನಚರಿಯನ್ನು ಹಾಗೂ ಸಮತೋಲನದ ಆಹಾರದ ಮಹತ್ವ, ಆರೋಗ್ಯದ ಗುಟ್ಟು, ಪರಿಸರ ಸಂರಕ್ಷಣೆ ಹಾಗೂ ವೈಯಕ್ತಿಕ ಮತ್ತು ಸಾಮೂಹಿಕ ಸ್ವಚ್ಛತೆ ಬಗ್ಗೆ ತರಬೇತಿ ನೀಡಿದರು.
ಎಸ್.ಎಂ. ಹೂಗಾರ ಮಾತನಾಡಿ, ಬಡತನ ನಿರ್ಮೂಲನಾ ಯೋಜನೆಯಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿ ಸ್ವ-ಸಹಾಯ ಸಂಘದ ಸದಸ್ಯರು ವಿವಿಧ ರೀತಿಯ ಆದಾಯ ತರುವ ಕಾರ್ಯಕ್ರಮ ಹಮ್ಮಿಕೊಂಡು ವೈಯಕ್ತಿಕ ಅಭಿವೃದ್ಧಿ ಹಾಗೂ ಅವರಿಂದ ಸಮಾಜದಲ್ಲಿ ನಾಲ್ವರಿಗೆ ಕೆಲಸ ಕೊಡುವ ಹೊಸ ಉದ್ಯೋಗ ಹಮ್ಮಿಕೊಂಡರೆ ಹಣಕಾಸಿನ ನೆರವು ನೀಡುವುದಾಗಿ ತಿಳಿಸಿದರು.
ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಅಧ್ಯಕ್ಷತೆ ವಹಿಸಿದ್ದರು. ಆರ್.ಸಿ. ಹುಣಸೀಮರದ, ಶ್ರೀನಿವಾಸ ಕರಿ, ಮಂಜುನಾಥ ಮುಳಗುಂದ, ನಾಗಲಿಂಗಪ್ಪ ಐಲಿ, ಬಸವರಾಜ ಗುಂಡಗಿ, ಮಂಜುಳಾ ರಾಂಡಗೆ, ಪ್ರಭಾವತಿ ಶಿರೂರ, ಹುಲಿಗೆಮ್ಮ ಬಣಕಾರ, ಪಂಪಾಪತಿ ಪಲ್ಲೇದ, ಉಮೇಶ ಹೂಗಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

