ಸುದ್ದಿ ಸಂಕ್ಷೇಪ
ಶಾಖಾಧಿಕಾರಿಗಳ ಸಮ್ಮೇಳನ
ಗದಗ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗದಗ ಪ್ರಾದೇಶಿಕ ಕಚೇರಿಯ ವ್ಯಾಪ್ತಿಯ 51 ಶಾಖೆಗಳ ಶಾಖಾಧಿಕಾರಿಗಳ ಸಮ್ಮೇಳನ ಜೂ. 7ರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಜರುಗಲಿದೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮಹಾಪ್ರಬಂಧಕ ಮುರಳಿನಾಥ ಗುಪ್ತಾ ಅವರ ನೇತೃತ್ವದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ 2012-13ರ ಪ್ರಗತಿ ಪರಶೀಲನೆ ಮತ್ತು 2013-14ರ ಗುರಿ ನಿಗದಿ ಹಂಚಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಪ್ರಬಂಧಕ ಎ.ಎ. ಉಪಾಧ್ಯ ತಿಳಿಸಿದ್ದಾರೆ.
12ರಂದು ಕೆಡಿಪಿ ಸಭೆ
ಗದಗ: ಮಾಸಿಕ ಕೆಡಿಪಿ ಸಭೆಯನ್ನು ಜಿಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜೂ. 12ರಂದು ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತ: ಇಬ್ಬರು ಸಾವು
ಲಕ್ಷ್ಮೇಶ್ವರ: ಪಟ್ಟಣದ ಹೊರವಲಯದ ದೊಡ್ಡೂರ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ. ಮೃತರನ್ನು ಲಿಂಗಸೂರಿನ ಯಲ್ಲಪ್ಪ ಮೂಖಪ್ಪ(55), ಲಕ್ಷ್ಮಣ ಮೂಖಪ್ಪ (24) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇವರು ತಂದೆ-ಮಗನಾಗಿದ್ದಾರೆ. ಲಕ್ಷ್ಮೇಶ್ವರ ಬೂದಿಹಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯಲ್ಲಿ ಕೆಲಸ ನಿರ್ವಹಸುತ್ತಿದ್ದರು. ಈ ಘಟನೆಯಲ್ಲಿ ಲಾರಿ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯವೇ ಕಾರಣ ಎಂದು ಕೆಲ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಲಾರಿ ರಸ್ತೆ ಪಕ್ಕಕ್ಕೆ ನುಗ್ಗಿದ್ದು, ಲಾರಿಯ ವೇಗಕ್ಕೆ ರಸ್ತೆಯ ಪಕ್ಕದಲ್ಲಿದ್ದ 4 ಮರಗಳು ಬುಡ ಸಮೇತ ಕಿತ್ತಿವೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸ್ಥಳಕ್ಕೆ ಸಿಪಿಐ ಪ್ರಕಾಶ ನಾಯ್ದು ಭೇಟಿ ನೀಡಿ ಪರಿಶೀಲಿಸಿದರು.
ಸಿಡಿಲಿಗೆ 6 ಕುರಿ ಬಲಿ
ಲಕ್ಷ್ಮೇಶ್ವರ: ಸಮೀಪದ ಹರದಗಟ್ಟಿ ಹಾಗೂ ಅಮರಾಪುರ ಗ್ರಾಮಗಳ ಮಧ್ಯದಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಯ ಸಂದರ್ಭದಲ್ಲಿ ಬಿದ್ದ ಸಿಡಿಲಿಗೆ 6 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದ ಕುರಿಗಳು ಸೋಮಣ್ಣ ಡಾಂಗೆ ಎನ್ನುವರಿಗೆ ಸೇರಿದ್ದಾಗಿವೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30 ಜನರಿಗೆ ಗಾಯ
ನರಗುಂದ: ಪಟ್ಟಣದಿಂದ ಸಾಬಳ, ಮೋರ, ಸಾಠ, ಕುಟಂಬದವರು ನವಲಗುಂದ ತಾಲೂಕಿನ ಮೊರಬಕ್ಕೆ ಕನ್ಯ(ವಧು) ಕೊಡಲಿಕ್ಕೆ ಟೆಂಪೋ ಮೂಲಕ ಹೋಗುವಾಗ ನರಗುಂದ-ಹುಣೆಸಿಕಟ್ಟಿ ಮಧ್ಯೆ ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಟೆಂಪೋ ಹಳ್ಳಕ್ಕೆ ಬಿದ್ದು 30ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಗಾಯಗೊಂಡವರಲ್ಲಿ 28 ಜನರಿಗೆ ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸಗೆ ಹುಬ್ಬಳ್ಳಿ ಕೆಎಂಸಿಗೆ ಸಾಗಿಸಲಾಗಿದೆ. ಇನ್ನುಳಿದ 7 ಜನರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ವೈದ್ಯರಗಳ ಗಮನಕ್ಕೆ
ಗದಗ: ಜಿಲ್ಲಾದ್ಯಂತ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ಪ್ರಕರಣಗಳು ವರದಿಯಾಗುತ್ತಿದ್ದು, ಈ ರೋಗಗಳ ನಿಯಂತ್ರಣ ಹಾಗೂ ಚಿಕಿತ್ಸೆಗಾಗಿ ಗದಗ ಹಳೆಯ ಜಿಲ್ಲಾ ಆಸ್ಪತ್ರೆಯಲ್ಲಿ 24್ಗ7 ಚಿಕಿತ್ಸಾ ಕೇಂದ್ರ ಪ್ರಾರಂಭಿಸಲಾಗಿದೆ.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಗದಗ-ಬೆಟಗೇರಿ ಅವಳಿ ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ಒಳರೋಗಿಯಾಗಿ ದಾಖಲಾಗಿದ್ದರೆ ಅಂತಹ ಪ್ರಕರಣಗಳ ವಿವರಗಳನ್ನು ಖಾಸಗಿ ವೈದ್ಯಾಧಿಕಾರಿಗಳು ಕಡ್ಡಾಯವಾಗಿ 24್ಗ7 ಚಿಕಿತ್ಸಾ ಕೇಂದ್ರಕ್ಕೆಯಾಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕಾಗಲಿ ವರದಿ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ ನಿವೃತ್ತ ಪೌರಸೇವಾ ನೌಕರರ ಸಭೆ
ಗದಗ: ಗದಗ ಜಿಲ್ಲಾ ನಿವೃತ್ತ ಪೌರಸೇವಾ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ಗದಗ ನಗರಸಭೆ ಆವರಣದಲ್ಲಿರುವ ಅಂಬೇಡ್ಕರ ಉದ್ಯಾನದಲ್ಲಿ ಜೂ. 8ರಂದು ಬೆಳಗ್ಗೆ 11ಕ್ಕೆ ಕರೆಯಲಾಗಿದೆ. ಬಿ.ಎನ್. ಶಿಂಗಾಡಿ ಸಭೆಯ ಅಧ್ಯಕ್ಷತೆ ವಹಿಸುವರು. ಪೌರಸೇವಾ ಪಿಂಚಣಿದಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕಾರ್ಯದರ್ಶಿ ಎಂ.ವಿ. ಹೂಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

