ದಾಜಿಬಾನಪೇಟ ಸುತ್ತ ಫುಟ್ಪಾತ್ ತೆರವು ಕಾರ್ಯಾಚರಣೆ
ಹುಬ್ಬಳ್ಳಿ: ರಸ್ತೆ ಬದಿ ವ್ಯಾಪಾರಕ್ಕಿಟ್ಟಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾನಗರ ಪಾಲಿಕೆ ಅಧಿಕಾರಿಗಳು ಗುರುವಾರವೂ ಫುಟ್ಪಾತ್ ತೆರವು ಕಾರ್ಯಾಚರಣೆ ಮುಂದುವರೆಸಿದರು. 'ಕನ್ನಡಪ್ರಭ' ಪ್ರಕಟಿಸಿದ 'ಫುಟ್ಪಾತ್ ಹೈಜಾಕ್' ಸರಣಿ ವಿಶೇಷ ವರದಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು, ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ಕಳೆದ ನಾಲ್ಕು ದಿನಗಳಿಂದ ಮುಂದುವರೆಸಿದ್ದಾರೆ. ಗುರುವಾರದಂದು ದಾಜಿಬಾನಪೇಟ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಫುಟ್ಪಾತ್ ಮೇಲೆ ಮಾರಾಟಕ್ಕಿಟ್ಟಿದ್ದ ಸೈಕಲ್, ತರಕಾರಿ, ನಾಮಫಲಕ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ವಶಕ್ಕೆ ತೆಗೆದುಕೊಂಡರು. ದಾಜಿಬಾನಪೇಟದಲ್ಲಿ ವಾಹನ ಸಂಚಾರ ಹಾಗೂ ಜನ ಸಂಚಾರ ಹೆಚ್ಚಾಗಿದ್ದು, ಫುಟ್ಪಾತ್ ಅತಿಕ್ರಮಣದಿಂದ ಹೆಚ್ಚು ಅಡಚಣೆಯಾಗಿತ್ತು. ಅಂಗಡಿಗಳ ಮಾಲೀಕರು ಫುಟ್ಪಾತ್ನಲ್ಲಿ ವ್ಯಾಪಾರದ ಸಾಮಗ್ರಿಗಳನ್ನು ಇಟ್ಟಿದ್ದರಿಂದ ಸಾರ್ವಜನಿಕರು ರಸ್ತೆ ಮೇಲೆಯೇ ಸಂಚರಿಸುತ್ತಿದ್ದರು. ಇದರಿಂದಾಗಿ ದಾಜಿಬಾನಪೇಟದಲ್ಲಿ ಸದಾ ವಾಹನಗಳ ದಟ್ಟಣೆ ಇರುತ್ತಿತ್ತು. ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಿದ್ದರಿಂದ ಸಾರ್ವಜನಿಕರು ರಸ್ತೆ ಮೇಲೆ ತಿರುಗಾಡುವುದು ಸಹಜವಾಗಿಯೇ ಕಡಿಮೆಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೂ ಅನುಕೂಲವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

