ಗದಗ

ಕಾಯಂ ಪೀಠ: ಅಭಿನಂದನೆ

Published On :

ಗದಗ: ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕದ ಜನರ ಬಹುದಿನಗಳ ಕನಸು ಈಗ ನನಸಾಗುವ ಕಾಲ ಬಂದಿದೆ. ಧಾರವಾಡ ಹಾಗೂ ಗುಲ್ಬರ್ಗಾ ಸಂಚಾರಿ ಹೈಕೋರ್ಟ್ ಪೀಠಗಳನ್ನು ಕಾಯಂ ಪೀಠಗಳನ್ನಾಗಿಸಲು ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವದ ನಿರ್ಧಾರ ಕೈಗೊಂಡಿದ್ದಕ್ಕೆ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಶಿರೂರ ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಹಾಗೂ ಗುಲ್ಬರ್ಗಾಗಳಲ್ಲಿನ ಸಂಚಾರಿ ಪೀಠಗಳು ಈ ಹಿಂದೆ 2008 ರಲ್ಲಿ ಪ್ರಾರಂಭವಾಗಿದ್ದು, ಅದಾಗ್ಯೂ ಸಂಚಾರಿ ಪೀಠವಾದ್ದರಿಂದ ಕಡತಗಳ ವಿಲೇವಾರಿ ಆಮೆಗತಿಯಲ್ಲಿ ಸಾಗಿತ್ತು, ವ್ಯಾಜ್ಯಗಳು ನೆನೆಗುದಿಗೆ ಬೀಳುತ್ತಿರುವುದರಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದ್ದು, ಈ ಎಲ್ಲ ತೊಂದರೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಅಧ್ಯಕ್ಷತೆಯಲ್ಲಿ ಸೇರಿದ್ದ ಕೇಂದ್ರ ಸಚಿವ ಸಂಪುಟ ಸಭೆಯು ಎರಡೂ ಪೀಠಗಳ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಕಕ್ಷಿದಾರರಿಗೆ ಶೀಘ್ರ ನ್ಯಾಯದಾನ ನೀಡುವ ನಿರ್ಧಾರ ಕೈಗೊಳ್ಳುವ ಮೂಲಕ ಈ 2 ಪೀಠಗಳನ್ನು ಖಾಯಂಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡರು. ಹೈಕೋರ್ಟ್‌ನಲ್ಲಿ ಇರುವ ಬಾಕಿ ಪ್ರಕರಣಗಳು ಈ ಪೀಠಗಳ ಮೂಲಕ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗಲಿದೆ. ಉತ್ತರ ಕರ್ನಾಟಕ ಪ್ರದೇಶದ ಜನರ ಬಹುಕಾಲದ ಬೇಡಿಕೆಗೆ ಜಯ ದೊರಕಿದಂತಾಗಿದ್ದು, ಈ ಕ್ರಮ ಅಭಿನಂದನಾರ್ಹವಾಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಮಲ್ಲಿಕಾರ್ಜುನ ಸುರಕೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.