ಗದಗ

ಶಿಕ್ಷಕರ ಕಾರ್ಯ ಶ್ಲಾಘನೀಯ: ಹಾದಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜೂ. 9
ಶಿಕ್ಷಣದಿಂದ ಮಗುವಿನ ಸರ್ವಾಂಗೀಣ ಪ್ರಗತಿಯಾಗುತ್ತದೆ. ಆ ದಿಸೆಯಲ್ಲಿ ಶಿಕ್ಷಕ ಬಳಗ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಬಿ.ಆರ್.ಪಿ. ಅಧಿಕಾರಿ ಅಶೋಕ ಹಾದಿ ಹೇಳಿದರು.
ಈಚೆಗೆ ಅವರು ಸ್ಥಳೀಯ ಸರ್ಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆ ನಂ. 10 ಗದಗ ಸೆಂಟ್ರಲ್ ಸ್ಕೂಲ್‌ನಲ್ಲಿ ದಾನಿಗಳಿಂದ ಪಡೆದ ಉಚಿತ ನೋಟ್‌ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.
ಶಾಲೆಯ ಗುರುಬಳಗ ಸಮುದಾಯದ ಸಹಕಾರದೊಂದಿಗೆ ರಚನಾತ್ಮಕವಾದ ಹಾಗೂ ಬಡ ವಿದ್ಯಾರ್ಥಿಗಳಿಗೆ ಕಲಿಯಲು ತೊಂದರೆಯಾಗದಂತೆ ಇಲಾಖೆ ನೀಡುವ ಪಠ್ಯಪುಸ್ತಕದೊಂದಿಗೆ ಉಚಿತವಾಗಿ ನೋಟ್‌ಪುಸ್ತಕಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಹಾಗೂ ಅಭಿನಂದನಾರ್ಹ. ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಮುಂದಿನ ಜೀವನದಲ್ಲಿ ಉನ್ನತ ಗುರಿ ಹೊಂದುವಂತೆ ಕರೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ್ದ ಯು.ಆರ್.ಸಿ. ಕೇಂದ್ರ ಗದಗ ಶಹರ ಸಮನ್ವಯಾಧಿಕಾರಿ ಎಂ.ಪಿ. ಚಿಂಚೆವಾಡೆ ಮಾತನಾಡಿ, ಮಕ್ಕಳ ಶಿಕ್ಷಣದ ಪ್ರಗತಿಗೆ ಶಿಕ್ಷಕರು ಹೆಚ್ಚು ಆಸಕ್ತಿವಹಿಸಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುತ್ತಿರುವುದು ಸಂತಸದ ಸಂಗತಿ. ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಲು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯ ಎಸ್.ಎನ್. ಬಳ್ಳಾರಿಯವರು ಮಾತನಾಡಿ, ಶಾಲಾ ಮಕ್ಕಳು ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಶಿಕ್ಷಕರೊಂದಿಗೆ ಕೈ ಜೋಡಿಸಿ ಸಹಕಾರ ನೀಡುತ್ತಿರುವ ಶಿಕ್ಷಣ ಅಭಿಮಾನಿಗಳನ್ನು ಸಮುದಾಯದ ಸಹಕಾರವನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಮೇಶ ಬಾರಕೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ವಿ. ಕುರಹಟ್ಟಿ, ಜಿ.ಆರ್. ಪಾಸ್ತೆ, ಎಸ್.ಆರ್. ಹಲಕುರ್ಕಿ ಮುಂತಾದವರು ಉಪಸ್ಥಿತರಿದ್ದರು. ಎಸ್.ಎ. ಚಂದಪ್ಪನವರ ಸ್ವಾಗತಿಸಿದರು. ಎಸ್.ಸಿ. ಹಾನಗಲ್ಲ ನಿರೂಪಿಸಿದರು. ಜೆ.ಜಿ. ಬಿಸರಳ್ಳಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.