ಗದಗ

ಉತ್ತಮ ಸಾಧನೆ: ಯಡಿಯೂರಪ್ಪ ವಿಶ್ವಾಸ

Published On :

ಗದಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಉತ್ತಮ ಸಾಧನೆ ಮಾಡುತ್ತೇವೆಂದು ಮಾಜಿ ಸಿಎಂ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಶನಿವಾರ ರಾತ್ರಿ ನಗರದ 24ನೇ ವಾರ್ಡ್‌ನಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗದಿತ ಸಮಯಕ್ಕಿಂತ ತಡವಾಗಿ ಆಗಮಿಸಿದ ಅವರು ನಗರದ ಐತಿಹಾಸಿಕ ಪ್ರಸಿದ್ಧ ಜೋಡು ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಅವರು ಕೆಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಮಾಜಿ ಸಚಿವ ಸಿಎಂ ಉದಾಸಿ  ಕೆಜೆಪಿ ಮುಖಂಡರಾಡ ಎಸ್.ಬಿ. ಸಂಕಣ್ಣವರ, ಸದು ಮದರಿಮಠ, ಜಿಲ್ಲಾ ಕೆಜೆಪಿ ಅಧ್ಯಕ್ಷ ರಾಜು ಕುರುಡಗಿ, ವಿವಿಧ ವಾರ್ಡ್‌ಗಳ ಅಭ್ಯರ್ಥಿಗಳು ಹಾಜರಿದ್ದರು. ನಂತರ ಗಂಗಾಪುರ ಪೇಟೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪ್ರಚಾರ ನಡೆಸಿದರು.
ಏನೂ ಹೇಳಲಾರೆ: ಗದಗ ಜಿಲ್ಲೆಯ 3 ಜನ ಶಾಸಕರು ಮೊದಲು ನಿಮ್ಮೊಂದಿಗೆ ಗುರುತಿಸಿಕೊಂಡು, ಈಗ ಮತ್ತೆ ಬಿಜೆಪಿಯಲ್ಲಿಯೇ ಉಳಿಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ನಾನೇನೂ ಹೇಳಲಾರೆ, ಆ ಬಗ್ಗೆ ಮಾತನಾಡಲಾರೆ ಎಂದು ಉತ್ತರಿಸಿದ್ದು ಹಲವಾರು ಸಂಶಯಕ್ಕೆ ಕಾರಣವಾಯಿತು. ಇನ್ನು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ತಟ್ಟೆಗೆ ಹಣ ಹಾಕಲು ದುಡ್ಡು ತೆಗೆದು ಮಾಧ್ಯಮಗಳನ್ನು ಗಮನಿಸಿ ದುಡ್ಡು ಹಾಕದೇ ಹಾಗೆಯೇ ಹೋಗಿದ್ದು ವಿಶೇಷವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.