ಗದಗ

ಚುನಾವಣಾ ನಿಯಮ ಪಾಲಿಸಿ: ಪಾಟೀಲ

Published On :

ನರಗುಂದ: ಪಟ್ಟಣದ ಪುರಸಭೆಗೆ ಸ್ಪರ್ಧಿಸಿರುವ ಎಲ್ಲ ಪಕ್ಷದ ಅಭ್ಯರ್ಥಿಗಳು ಚುನಾವಣಾ ಆಯೋಗ ನಿಗದಿಪಡಿಸಿದ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ವೀಕ್ಷಕ ಎಸ್.ಜಿ. ಪಾಟೀಲ ಹೇಳಿದರು. ಅವರು ಶುಕ್ರವಾರ ಪಟ್ಟಣದ ಪುರಸಭಾ ಕಲಾ ಭವನದಲ್ಲಿ ಎಲ್ಲ ವಾರ್ಡ್‌ಗಳಿಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಈ ಸ್ಥಳೀಯ ವಾರ್ಡ್‌ಗಳ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮಾ. 1 ರಿಂದ 5ರ ವರೆಗೆ ಪ್ರಚಾರ ಮಾಡಲು ಅವಕಾಶವಿದೆ. ಅಭ್ಯರ್ಥಿಗಳು ಈ ದಿನದೊಳಗೆ ಪ್ರಚಾರಕ್ಕೆ ಮತ್ತು ತಮ್ಮ ವಾಹನಗಳಿಗೆ ತಮ್ಮ ಪಕ್ಷದ ಚಿಹ್ನೆಗಳ ಬ್ಯಾನರ್, ಬಂಟಿಂಗ್ಸ್ ಕಟ್ಟಬೇಕಾದರೆ ಕಡ್ಡಾಯವಾಗಿ ಪುರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅದಕ್ಕೆ ಪರವಾನಿಗೆ ಪಡೆದುಕೊಳ್ಳಬೇಕು.
ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ವಿರೋಧಿ ಅಭ್ಯರ್ಥಿಗಳ ಮೇಲೆ ಇಲ್ಲದ ಸಲ್ಲದ ಆರೋಪ, ಹಣ ನೀಡುವ ಮೂಲಕ ಮತದಾರರ ಗಮನ ಸೆಳೆಯಲು ಪ್ರಯತ್ನಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ತರಹದ ಘಟನೆಗಳು ತಮ್ಮ ವಾರ್ಡ್‌ಗಳಲ್ಲಿ ಕಂಡು ಬಂದಲ್ಲಿ, ಕೂಡಲೇ ಚುನಾವಣಾ ಅಧಿಕಾರಿಗಳಿಗೆ ತಿಳಿಸುವಂತೆ ಕೋರಿದರು.
ಡಿ. ಮೋಹನ, ತಹಸೀಲ್ದಾರಾ ಪಿ.ಜಿ. ಗಣಾಚಾರಿ, ಪುರಸಭೆ ಅಧಿಕಾರಿ ಎಸ್. ರಾಜಶೇಖರ, ಸಿಪಿಐ ಪ್ರಶಾಂತ ಸಿದ್ದನಗೌಡ್ರ, ಶಿಕ್ಷಣಧಿಕಾರಿ ಮಂಗಳಾ ಪಾಟೀಲ, ತಾಪಂ ಅಧಿಕಾರಿ ಬಿ.ವಿ. ಪಾಟೀಲ, ಶಿಶು ಅಭಿವೃದ್ಧಿ ಅಧಿಕಾರಿ ಟಿ.ಜಿ. ಶಂಕರಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.