ಗದಗ

ಸಂಭ್ರಮದ ಭಾವಚಿತ್ರ ಮೆರವಣಿಗೆ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 3
ಲಿಂ. ಹಾನಗಲ್ ಕುಮಾರಸ್ವಾಮಿಗಳವರ 83ನೇ ಪುಣ್ಯಸ್ಮರಣೋತ್ಸವ ಹಾಗೂ ಲಿಂ.ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 99ನೇ ಜನ್ಮದಿನೋತ್ಸವದ ಅಂಗವಾಗಿ ಭಾನುವಾರ ನಗರದ ಪ್ರಮುಖ ಬೀದಿಗಳಲ್ಲಿ ಹಾನಗಲ್ ಕುಮಾರಸ್ವಾಮಿ ಹಾಗೂ ಪುಟ್ಟರಾಜ ಕವಿಗವಾಯಿಗಳವರ ಭಾವಚಿತ್ರ ಮೆರವಣಿಗೆ ಸಂಭ್ರಮದಿಂದ ಜರುಗಿತು.
ನಗರದ ವೀರೇಶ್ವರ ಪುಣ್ಯಾಶ್ರಮದಿಂದ ಪ್ರಾರಂಭವಾದ ಮೆರವಣಿಗೆಯು ಎಪಿಎಂಸಿ ಯಾರ್ಡ್, ಭೂಮರೆಡ್ಡಿ ವೃತ್ತ, ಸ್ಟೇಶನ್ ರಸ್ತೆ, ತೋಂಟದಾರ್ಯ ಮಠ, ಟಾಂಗಾಕೂಟ ಸೇರಿದಂತೆ ಪ್ರಮುಖ ಬೀದಿಯಲ್ಲಿ ಭಕ್ತರು ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಹಿಳೆಯರು ಆರತಿಯೊಂದಿಗೆ ಸಾಗಿದರು. ಮೆರವಣಿಗೆಯೂ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಭಕ್ತರು ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಪುಣ್ಯಾಶ್ರಮದಲ್ಲಿರುವ ಹಾನಗಲ್ ಕುಮಾರಸ್ವಾಮಿ ಹಾಗೂ ಪುಟ್ಟರಾಜರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಭಾನುವಾರ ಬೆಳಗ್ಗೆಯಿಂದಲೇ ಆಗಮಿಸಿ, ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.