ಗದಗ

ಪುಟ್ಟರಾಜರ ಕೊಡುಗೆ ಸ್ಮರಣೀಯ

Published On :

ಗದಗ:  ಸಮಾಜ, ಸಂಗೀತ, ಸಾಹಿತ್ಯ, ಕಲೆ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಪಂ. ಪುಟ್ಟರಾಜ ಗವಾಯಿಗಳವರ ಕೊಡುಗೆ ಸ್ಮರಣೀಯ ಎಂದು ಡಾಪಿಜಿಎಎಸ್ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಯ್ಯಜ್ಜ ಹೇಳಿದರು.
ಪಂಡಿತ ಪಂಚಾಕ್ಷರಿ ಗವಾಯಿಗಳವರ ಸಂಗೀತ ಮಹಾವಿದ್ಯಾಲಯದಲ್ಲಿ ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ಪುಣ್ಯಸ್ಮರಣೆ ಹಾಗೂ ಪುಟ್ಟರಾಜ ಕವಿ ಗವಾಯಿಗಳವರ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಡಾ. ಎಂ.ಎಲ್. ಗುಳೇದಗುಡ್ಡ ಮಾತನಾಡಿ, ಒಗ್ಗಟ್ಟಿನಲ್ಲಿ ಯಶಸ್ಸು ಇದೆ. ಪ್ರತಿಯೊಬ್ಬರು ಕಾಲೇಜಿನ ಶ್ರೇಯೋಭಿವೃದ್ಧಿ ಬಗ್ಗೆ ಕಾರ್ಯೋನ್ಮುಖರಾಗಿ ಗುಣಾತ್ಮಕ ಶಿಕ್ಷಣ ನೀಡುವುದರಿಂದ ವಿದ್ಯಾರ್ಥಿಗಳು ಜಾಗತಿಕ ಸವಾಲುಗಳನ್ನು ಸ್ವೀಕರಿಸಿ, ಎದುರಿಸುವಂತ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಡಾ. ಎಂ.ಎನ್. ಕಾಮನಹಳ್ಳಿ ಮಾತನಾಡಿ, ಭಾರತವು ಧಾರ್ಮಿಕ ಕ್ಷೇತ್ರದ ತವರೂರಿದ್ದಂತೆ. ಮಠ ಮಾನ್ಯಗಳಿಂದ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳು ಬೆಳೆದು ಬರಲು ಸಾಧ್ಯವಾಗಿದೆ ಎಂದರು. ಕಲ್ಲಯ್ಯಜ್ಜನವರು ಡಾ. ಗುಳೇದಗುಡ್ಡ ಹಾಗೂ ಡಾ. ಕಾಮನಹಳ್ಳಿ ಅವರನ್ನು ಸನ್ಮಾನಿಸಿದರು. ಪ್ರಾ. ವಿ.ಎಂ. ಗುರುಮಠ ಎಲ್.ವಿ. ಮುದ್ದಣ್ಣನವರ, ಸ್ಥಾನಿಕ ಸಮಿತಿಯ ಅಧ್ಯಕ್ಷ ಎಸ್.ಎಂ. ಗೌಡರ ಉಪಸ್ಥಿತರಿದ್ದರು. ಪ್ರೊ. ಗಂಗಾಧರ ಹಿಡ್ಕಿಮಠ ನಿರೂಪಿಸಿದರು. ಡಾ. ಮೃತ್ಯುಂಜಯ ಶೆಟ್ಟರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.