ಗದಗ

ನರೇಗಲ್ಲದಲ್ಲಿ ವಾಂತಿ-ಭೇದಿ: ಪರಿಶೀಲನೆ

Published On :

ನರೇಗಲ್ಲ: ಸ್ಥಳಿಯ ಪಪಂ ವ್ಯಾಪ್ತಿಗೊಳಪಡುವ ಕೊಂಡಿ ಮತ್ತು ಈಟಿಯವರ ಓಣಿಯಲ್ಲಿ ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡಿದ್ದು, ಜಿಲ್ಲಾ ಆರೋಗ್ಯ ಸಮೀಕ್ಷಣಾ ಅಧಿಕಾರಿ ಡಾ. ನೀಲಗುಂದ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.  ಇಲ್ಲಿಯ ನೀರಿನ ಸಂಗ್ರಹಗಾರಕ್ಕೆ ಬಳಸಲ್ಪಡುವ ಟ್ಯಾಂಕ್‌ಗಳು ಶುಚಿಯಾಗಿದ್ದು, ಇದು ನೀರಿನ ಸಮಸ್ಯೆಯಲ್ಲ. ಈ ಸಮಸ್ಯೆ ಆಹಾರದಲ್ಲಿನ ವ್ಯತ್ಯಾಸದಿಂದಾಗಿದೆ. ಇತ್ತೀಚೆಗೆ ಕಂಡುಬಂದ ಈ ಸಮಸ್ಯೆಯನ್ನು ಬಗೆಹರಿಸಲು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಮಜರೇ ಗ್ರಾಮಗಳಲ್ಲಿ ಎಲ್ಲಿ ಎಣ್ಣೆ, ಕರಿದ ಪದಾರ್ಥಗಳನ್ನು ಬಳಸುತ್ತಿದ್ದಾರೆಯೋ, ಅದನ್ನು ತಕ್ಷಣದಿಂದ ಸ್ಥಗಿತಗೊಳಿಸಬೇಕೆಂದು ಸಂಬಂಧಿಸಿದ ಎಲ್ಲ ಅಂಗಡಿಗಳಿಗೆ ನೋಟಿಸ್ ಹೊರಡಿಸಲಾಗಿದೆ. ಆದರೂ, ಕೆಲವು ಅಂಗಡಿಗಳಲ್ಲಿ ಈ ತರಹದ ಪದಾರ್ಥಗಳನ್ನು ತಯಾರಿಸಿರುವುದನ್ನು ಮನಗಂಡು ಮುಖ್ಯಾಧಿಕಾರಿ ಹಾಗೂ ಅಭಿಯಂತರ ವಿ.ಪಿ. ಕಾಟೇವಾಲೆ ಹಾಗೂ ಸಿಬ್ಬಂದಿಯೊಂದಿಗೆ ಧಾವಿಸಿ, ಅಂತಹ ಅಂಗಡಿಗಳಲ್ಲಿನ ಆಹಾರ ಪದಾರ್ಥಗಳನ್ನು ತಕ್ಷಣವೇ ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಐ.ಕೆ. ಗುಡದಾರಿ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.