ವೀಕ್ಷಕರ ತಂಡ ಭೇಟಿ
ಗಜೇಂದ್ರಗಡ: ಮತದಾನಕ್ಕೆ ಕ್ಷಣಗಣನೆ ಆರಂಭವಾಗುತ್ತಿದಂತೆ ಕಣದಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ಪಕ್ಷಗಳ ಮುಖಂಡರಿಗೆ ಈಗ ಢವ ಢವ ಶುರುವಾಗಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ವೀಕ್ಷಕ ಎಸ್.ಜಿ. ಪಾಟೀಲ ನೇತೃತ್ವದ ತಂಡ ಪಟ್ಟಣಕ್ಕೆ ಭೇಟಿ ನೀಡಿ ಶಾಂತಿಯುತ ಮತದಾನ ನಡೆಸುವ ಕುರಿತು ಚುನಾವಣಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. ವಿವಿಧ ಮತಗಟ್ಟೆಗಳಿಗೆ ತೆರಳಿ ಪರಿಶೀಲಿಸಿದ ನಂತರ ಹಲವಾರು ವಾರ್ಡ್‌ಗಳಿಗೆ ತೆರಳಿ ಅನಧಿಕೃತವಾಗಿ ಕಟ್ಟಲಾದ ಬ್ಯಾನರ್‌ಗಳನ್ನು ತೆರವುಗೊಳಿಸಲು ಆದೇಶಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ, ಪಟ್ಟಣದ ಪುರಸಭೆಯ 23 ವಾರ್ಡ್‌ಗಳಿಗೆ ನಡೆಯುವ ಚುನಾವಣೆಗೆ 25 ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು, ಎಲೆಕ್ಟ್ರಾನಿಕ್ ಯಂತ್ರದ ಮೂಲಕ ಮತದಾನ ನಡೆಯಲಿದೆ. ಶಾಂತಿಯುತವಾಗಿ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು. ಚುನಾವಣಾ ಅಧಿಕಾರಿ ಪ್ರಶಾಂತ ವರಗಪ್ಪನವರ, ವಿ.ಕೆ. ಕಾಳಪ್ಪನವರ, ಪುರಸಭಾ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಮಹೇಶ ನಿಡಶೇಶಿ, ಸಿ.ಡಿ. ದೊಡ್ಡಮನಿ, ಬಸವರಾಜ ಬಳಗಾನೂರ ಉಪಸ್ಥಿತರಿದ್ದರು.
ನಾಳೆ ಉಪನ್ಯಾಸ
ಗದಗ: ಸ್ವಾಮಿ ವಿವೇಕಾನಂದರ 150ನೇ ಜಯಂತ್ಯುತ್ಸವದ ಅಂಗವಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ ಗದಗ ಇವರ ಆಶ್ರಯದಲ್ಲಿ ಮಾ. 8ರ ಬೆಳಗ್ಗೆ 10.30 ಗಂಟೆಗೆ ಸ್ಥಳೀಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ 'ಸ್ವಾಮಿ ವಿವೇಕಾನಂದರು ಮತ್ತು ಕರ್ನಾಟಕದ ಶಿವಶರಣರು' ಒಂದು ತೌಲನಿಕ ಅವಲೋಕನ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಬಿಜಾಪುರ ಜ್ಞಾನ ಯೋಗಾಶ್ರವುದ ಸಿದ್ದೇಶ್ವರ ಶ್ರೀಗಳು ನೆರವೇರಿಸುವರು. ಅಧ್ಯಕ್ಷತೆಯನ್ನು ಗದುಗಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಶ್ರೀಗಳು ವಹಿಸುವರು. ಅತಿಥಿಗಳಾಗಿ ಪ್ರೊ. ಗುರುಲಿಂಗ ಕಾಪಸೆ ಪಾಲ್ಗೊಳ್ಳಲಿದ್ದಾರೆ. ವಿಚಾರ ಸಂಕಿರಣದ ಮೊದಲ ಗೋಷ್ಠಿಯು ಮಧ್ಯಾಹ್ನ 12.30 ಗಂಟೆಗೆ ಆರಂಭಗೊಳ್ಳಲಿದ್ದು, ಆಧ್ಯಾತ್ಮದ ನೆಲೆಗಳು ಕುರಿತು ಡಾ. ಎಚ್.ಎನ್. ಮುರಳಿಧರ ಉಪನ್ಯಾಸ ನೀಡಲಿದ್ದು, ಸ್ವಾಮಿ ವಿವೇಕಾನಂದ ಮತ್ತು ಬಸವಣ್ಣ ಕುರಿತು ನಡೆಯುವ ಗೋಷ್ಠಿಯಲ್ಲಿ ಪ್ರೊ. ಶಶಿಧರ ತೋಡ್ಕರ್ ಉಪನ್ಯಾಸ ನೀಡುವರು. ಮಧ್ಯಾಹ್ನ 2.30 ಗಂಟೆಗೆ ನಡೆಯುವ 2ನೇ ಗೋಷ್ಠಿಯಲ್ಲಿ ಪ್ರೊ. ಜಿ.ಎಸ್.ಜಯದೇವ ಅವರು ಧಾರ್ಮಿಕ ಸುಧಾರಣೆಯ ಸ್ವರೂಪ ಕುರಿತು, ಡಾ. ಎಚ್.ವಿ. ಪೂಜಾರ ಅವರು ಸಾಮಾಜಿಕ ಕಳಕಳಿ ಕುರಿತು ಉಪನ್ಯಾಸ ನೀಡುವರು. ಸಂಜೆ 4.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ವಹಿಸುವರು. ಅತಿಥಿಗಳಾಗಿ ನಂದಿವೇರಿ ಮಠದ ಶಿವಕುಮಾರ ಶ್ರೀಗಳು ಆಗಮಿಸುವರು. ಅಧ್ಯಕ್ಷತೆಯನ್ನು ಹಂಪಿ ವಿವಿಯ ಪ್ರೊ. ಟಿ.ಆರ್. ಚಂದ್ರಶೇಖರ ವಹಿಸುವರು ಎಂದು ಮಾಜಿ ಶಾಸಕ ಡಿ.ಆರ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

