ಗದಗ

ಸ್ತ್ರೀಯರು ಸಾಕ್ಷರರಾಗಿ: ನ್ಯಾ. ಶ್ರೀಕಾಂತ

Published On :

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದಿ ಇಲಾಖೆ ಕೊಪ್ಪಳ ಹಾಗೂ ಸಂದೇಶ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕೊಪ್ಪಳ ಹಾಗೂ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿಯ ಜಿಲ್ಲಾ ನ್ಯಾಯಾಲಯದ ಸಾಕ್ಷಿದಾರ ಮೊಗಸಾಲೆ ಕಟ್ಟಡ ಆವರಣದಲ್ಲಿ ಶುಕ್ರವಾರ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಕಾರ್ಯಾಗಾರ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ ಬಲಬಾದಿ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಎಲ್ಲರಲ್ಲಿ ಕಾನೂನಿನ ಅರಿವು ಮೂಡಿಸಬೇಕು ಎಂದರು.
ಸಿವಿಲ್ ಜಡ್ಜ್ ಶಿವರಾಮ ಕೆ. ಮಾತನಾಡಿ, ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಬಾಲ್ಯವಿವಾಹ ತಡೆಗಟ್ಟಲು ದೃಢ ನಿರ್ಧಾರ ಕೈಗೊಂಡು ಗ್ರಾಮ ಮಟ್ಟದಲ್ಲಿ ಜನ ಜಾಗೃತಿ ಮೂಡಿಸಬೇಕು ಎಂದರು.
ಸಿವಿಲ್ ಜಡ್ಜ್ ಕಾವೇರಿ ಮಾತನಾಡಿ, ಮಹಿಳೆಯರು ಶಿಕ್ಷಣದಿಂದ ಮುಂದೆ ಬರಬೇಕು ಎಂದರು. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಮಾತನಾಡಿ, ಮಹಿಳೆಯರು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರ್ಥ ಮಾಡಿಕೊಂಡು ಬಾಲ್ಯ ವಿವಾಹ, ವರದಕ್ಷಿಣೆ ಪಿಡುಗು ಸೇರಿದಂತೆ ಅನಿಷ್ಟ ಪದ್ಧತಿ ವಿರುದ್ಧ ಸಿಡಿದೇಳಬೇಕು ಎಂದರು.
ಈ ಸಂದರ್ಭದಲ್ಲಿ ವಿ. ದೊರೆಸ್ವಾಮಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ. ಕಣವಿ, ವಿ.ಎಂ ಭೂಸನೂಮಠ, ಶಾಂತಶ್ರೀ, ಕಾಳಮ್ಮ ಪತ್ತಾರ, ಶಿವಲೀಲಾ ಹೊನ್ನೂರು, ಸಾವಿತ್ರಿ ಮುಜುಮದಾರ, ಎಂ ಮುನಿರಾಜು, ಎಚ್.ಪಿ. ಜಗದೀಶ, ನಾಗನಗೌಡ, ಎಚ್,ಎಸ್, ಹೊನ್ನುಂಚಿ, ಬಿ.ಟಿ. ಬೊಗೇಶ, ಇಲಾಖೆಯ ಸಿಬ್ಬಂದಿ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಪ್ರತಿನಿಧಿಗಳು, ಮಕ್ಕಳ ರಕ್ಷಣಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.