ಮಹಿಳೆಯರಿಗೆ ಶಿಕ್ಷಣ ಅವಶ್ಯ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮಾ. 9
ಮಹಿಳೆಯರ ಮೇಲೆ ಪ್ರತಿನಿತ್ಯ ದೌರ್ಜನ್ಯ ಹೆಚ್ಚುತ್ತಿರುವುದು ನೋವಿನ ಸಂಗತಿಯಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ನಿಲ್ಲಲು ಮಹಿಳೆಯರಿಗೆ ಶಿಕ್ಷಣ ಅಗತ್ಯವಾಗಿದೆ ಎಂದು ಗದುಗಿನ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಉಮೇಶ ಮೂಲಿಮನಿ ಹೇಳಿದರು.
ಅವರು ಶುಕ್ರವಾರ ಸಂಜೆ ಪಟ್ಟಣದ ಗೊಲ್ಲಾಳೇಶ್ವರ ದೇವಸ್ಥಾನದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜರುಗಿದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆ ಇಂದು ಎಲ್ಲ ರಂಗಗಳಲ್ಲಿ ತನ್ನ ಪ್ರತಿಭೆ ತೋರುತ್ತಿರುವುದು ಶ್ಲಾಘನೀಯವಾಗಿದೆ. ಜಗತ್ತು ವೇಗವಾಗಿ ಮುಂದುವರೆಯುತ್ತಿದ್ದರೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ.
ಮಹಿಳೆಯರ ಮೇಲೆ ನಡೆಯುತ್ತಿರುವ ಕೌಟುಂಬಿಕ ದೌರ್ಜನ್ಯಗಳು ನಿಲ್ಲಬೇಕಾದಲ್ಲಿ ಮಹಿಳೆಯರಿಗೆ ಶಿಕ್ಷಣ ಅವಶ್ಯವಾಗಿದೆ. ನಾವು ಜಗತ್ತಿನಲ್ಲಿ ಮಹಿಳೆ ಇಲ್ಲದಿರುವ ಸಮಾಜವನ್ನು ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಪ್ರತಿ ನಿತ್ಯ ಮಹಿಳೆ ಎಲ್ಲ ರೀತಿಯಲ್ಲಿ ಸಮಾಜಕ್ಕೆ ನೇರವಾಗುತ್ತ ತನ್ನ ಅಮೂಲ್ಯ ಸೇವೆ ನೀಡುತ್ತಿದ್ದಾಳೆ. ಆದ್ದರಿಂದ ಮಹಿಳೆಗೆ ನಾವು ಗೌರವ ನೀಡಬೇಕಾಗಿದೆ. ಭೂಮಿಯ ಮೇಲೆ ಜನಿಸುವ ಪ್ರತಿಯೊಂದು ಮಗುವಿನ ಜೀವಿಸುವ ಹಕ್ಕನ್ನು ಯಾರೂ ಕಸಿಯುವಂತಿಲ್ಲ. ಹುಟ್ಟುವ ಮಗು ಹೆಣ್ಣಾದರೆ ಧೈರ್ಯಗೆಡುವ ಅಗತ್ಯವಿಲ್ಲ. ನಿಮ್ಮ ಮಗುವಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ನೀಡುವ ಅವಶ್ಯಕತೆಯಿದೆ ಎಂದರು.
ಮಹಿಳೆಯರ ಮೇಲೆ ನಡೆಯತ್ತಿರುವ ದೌರ್ಜನ್ಯ ತಡೆ ಕಾಯ್ದೆ ಕುರಿತು ಮಹಿಳಾ ನ್ಯಾಯವಾದಿ ಎನ್.ಸಿ. ಅಮಾಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮೇಶ್ವರ ವಕೀಲರ ಸಂಘದ ಅಧ್ಯಕ್ಷ ಎ.ಬಿ. ಪಾಟೀಲ ಮಾತನಾಡಿದರು.
ಲಕ್ಷ್ಮೇಶ್ವರದ ದಿವಾಣಿ ನ್ಯಾಯಾಧೀಶ ಎಂ.ಐ. ಕಮತಗಿ, ಬಿ.ಎಸ್. ಘೊಂಗಡಿ, ಆರ್.ಸಿ. ಪಾಟೀಲ, ಎನ್.ಸಿ. ಪಾಟೀಲ, ಎಸ್.ಬಿ. ಕಮತದ, ಪುರಸಭೆಯ ಮಾಜಿ ಸದಸ್ಯೆ ಕಮಲಮ್ಮ ಪಾಟೀಲ ಮುಂತಾದವರು ಹಾಜರಿದ್ದರು. ಬಿ.ಎಸ್. ಬಾಳೇಶ್ವರಮಠ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

