ಗದಗ

ಶಿರಹಟ್ಟಿ ಪಪಂ ಅತಂತ್ರ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಮಾ. 11
ಪಟ್ಟಣ ಪಂಚಾಯಿತಿಯ 16 ವಾರ್ಡ್‌ಗಳ ಮತ ಎಣಿಕೆ ಸೋಮವಾರ ಪಟ್ಟಣದ ಎಫ್.ಎಂ. ಡಬಾಲಿ ಹೈಸ್ಕೂಲನಲ್ಲಿ ಬೆಳಗ್ಗೆ 8 ಗಂಟೆಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರಂಭವಾಯಿತು.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ವಾರ್ಡ್ ನಂ. 1-2 ಹಾಗೂ 10-11ನೇ ವಾರ್ಡ್‌ಗಳ ಫಲಿತಾಂಶವನ್ನು ಪ್ರಕಟಿಸಲಾಯಿತು. ಮತ ಎಣಿಕೆಯ ಕೇಂದ್ರದ ಸುತ್ತಲೂ ಉತ್ಸಾಹದಿಂದ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳ ಬೆಂಬಲಿಗರು ತಮ್ಮ ಅಭ್ಯರ್ಥಿಗಳ ಆಯ್ಕೆ ಪ್ರಕಟವಾಗುತ್ತಿದ್ದಂತೆಯೇ ಪರಸ್ಪರ ಗುಲಾಲು ಎರಚಿ, ವಿಜಯೋತ್ಸವ ಆಚರಿಸಿದರು.
ತೀವ್ರ ಕುತೂಹಲ ಕೆರಳಿಸಿದ್ದ ವಾರ್ಡ್ ನಂ. 8ರಲ್ಲಿ ಸತತ ಮೂರನೇ ಬಾರಿ ಕಾಂಗ್ರೆಸ್ ಪಕ್ಷದಿಂದ ಹುಮಾಯೂನ ಮಾಗಡಿ ಜೆಡಿಎಸ್‌ನ ಅಶರತಅಲಿ ಡಾಲಾಯತ ಅವರನ್ನು 30 ಮತಗಳ ಅಂತರದಿಂದ ಸೋಲಿಸಿದರು. ಕಳೆದ ಬಾರಿ ಕಾಂಗ್ರೆಸ್ 2 ಸ್ಥಾನ ಪಡೆದುಕೊಂಡಿದ್ದರೆ ಈ ಬಾರಿ 5 ಸ್ಥಾನ ಪಡೆದಿದೆ. ಕಳೆದ ಬಾರಿ ಅಧಿಕಾರದ ಗದ್ದುಗೆ ಹಿಡಿದಿದ್ದ ಜೆಡಿಎಸ್ ಈ ಬಾರಿ ಕೇವಲ 7 ಸ್ಥಾನಗಳಿಗೆ ತೃಪ್ತಿಪಡುವಂತಾಗಿದೆ. ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಸ್ಸಾರ್ 1 ಸ್ಥಾನ ಗಳಿಸಿದೆ.
ಆಡಳಿತಾರೂಡ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮತದಾರರು ಅತ್ತ ಬಿಜೆಪಿಯನ್ನು ತಿರಸ್ಕರಿಸಿ, ಇತ್ತ ಜೆಡಿಎಸ್ ಅಥವಾ ಕಾಂಗ್ರೆಸ್‌ಗೆ ಸಂಪೂರ್ಣ ಅಧಿಕಾರ ನೀಡದಿರುವುದು ಈ ಚುನಾವಣೆಯಲ್ಲಿ ಸ್ಪಷ್ಟವಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಕೂಚಿ ಎಂದೇ ಪರಿಗಣಿಸಲಾದ ಈ ಚುನಾವಣೆಯಲ್ಲಿ ಮತದಾರ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಪಕ್ಷಕ್ಕೂ ನಿಚ್ಚಳ ಬಹುಮತ ನೀಡದಿರುವುದು ಸ್ಪಷ್ಟವಾದಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.