ಗದಗ

ಶಿರಹಟ್ಟಿ ಪಟ್ಟಣ ಪಂಚಾಯಿತಿ ಅತಂತ್ರ

Published On :

ಶಿರಹಟ್ಟಿ: ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯತ್ ಅತಂತ್ರ ಸ್ಥಿತಿಯಲ್ಲಿದೆ.
ಇಲ್ಲಿ 17 ವಾರ್ಡ್‌ಗಳಿದ್ದು, ಜೆಡಿಎಸ್ 7ನ್ನು ಗೆಲ್ಲುವ ಮೂಲಕ ಪಕ್ಷದ ಜಿಲ್ಲಾಧ್ಯಕ್ಷ ವಿಶ್ವನಾಥ ಕಪ್ಪತ್ತನವರ ತಮ್ಮ ಪ್ರಾಬಲ್ಯ ತೋರಿಸಿದ್ದಾರೆ.
ಕಾಂಗ್ರೆಸ್ 5, ಆಡಳಿತಾರೂಢ ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡರೆ ಬಿಎಸ್ಸಾರ್ 1 ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಜಯಶಾಲಿಗಳಾಗಿದ್ದಾರೆ.
ಶಾಸಕ ರಾಮಣ್ಣ ಲಮಾಣಿ ಮುಖಭಂಗ ಅನುಭವಿಸಿದ್ದು, ಮತದಾರರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಆದರೆ, ಜೆಡಿಎಸ್, ಕಾಂಗ್ರೆಸ್‌ಗಳಿಗೆ ಸ್ಪಷ್ಟ ಜನಾದೇಶ ಕೊಟ್ಟಿಲ್ಲ. ಈ ಅತಂತ್ರ ಪರಿಸ್ಥಿತಿ ಕುದುರೆ ವ್ಯಾಪಾರಕ್ಕೂ ದಾರಿ ಮಾಡಿಕೊಡುವ ಸಾಧ್ಯತೆ ಇದೆ. ಪಕ್ಷದವರಿಗೆ ಹಾಗೂ ಪಕ್ಷೇತರರಿಗೆ ಬೇಡಿಕೆ ಕುದುರಿದೆ. ಜೆಡಿಎಸ್-ಕಾಂಗ್ರೆಸ್ ಅಥವಾ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಅತಂತ್ರ ಸ್ಥಿತಿಯಲ್ಲಿ ಲಕ್ಷ್ಮೇಶ್ವರ ಪುರಸಭೆ
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪುರಸಭೆಯಲ್ಲೂ ಮತದಾರ ಸ್ಪಷ್ಟ ಜನಾದೇಶ ನೀಡದೆ ಅತಂತ್ರ ಸ್ಥಿತಿ ಉಂಟಾಗಿದೆ. ಒಟ್ಟು 23 ಸ್ಥಾನಗಳಲ್ಲಿ 2ನೇ ವಾರ್ಡ್‌ಗೆ ಅವಿರೋಧ ಆಯ್ಕೆಯಾಗಿತ್ತು. ಕಾಂಗ್ರೆಸ್ 10 ಸ್ಥಾನ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ.
ಬಿಎಸ್ಸಾರ್ ಕಾಂಗ್ರೆಸ್ 7 ಸ್ಥಾನಗಳಲ್ಲಿ ಹವಾ ಎಬ್ಬಿಸಿದೆ. ಬಿಜೆಪಿ ಕೇವಲ ಮೂರು ಸ್ಥಾನ ಗೆದ್ದು ಸಂಕಷ್ಟಕ್ಕೆ ಸಿಲುಕಿದೆ. ಕೆಜೆಪಿ ಒಂದು ಸ್ಥಾನದಲ್ಲಿ ಗೆದ್ದು ಖಾತೆ ತೆರೆದಿದೆ. ಎರಡು ಕಡೆ ಪಕ್ಷೇತರರು (ಒಂದು ಅವಿರೋಧ ಸೇರಿ) ಆರಿಸಿ ಬಂದದ್ದಾರೆ. ಜೆಡಿಎಸ್ ಹೇಳ ಹೆಸರಿಲ್ಲದಂತೆ ನೆಲಕಚ್ಚಿದೆ. ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂಬುದೇ ಸದ್ಯದ ಕುತೂಹಲ.

ನರೇಗಲ್ಲ ಪಪಂ ಅಧಿಕಾರ ಯಾರಿಗೆ?
ನರೇಗಲ್ಲ: ನರೇಗಲ್ಲ ಪಟ್ಟಣ ಪಂಚಾಯತ್ ಕೂಡ ಅತಂತ್ರ ಸ್ಥಿತಿಯಲ್ಲಿದೆ. ಒಟ್ಟು 17 ವಾರ್ಡಗಳಿದ್ದು, ಆಡಳಿತಾರೂಢ ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಬಹುಮತಕ್ಕೆ ಎರಡು ಸ್ಥಾನಗಳ ಕೊರತೆ ಇದೆ. ಕಾಂಗ್ರೆಸ್ 6 ಸ್ಥಾನ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಕೆಜೆಪಿಯ ಒಬ್ಬರು ಹಾಗೂ ಇಬ್ಬರು ಪಕ್ಷೇತರರು ಆಯ್ಕೆಯಾಗಿ ಸಂಚಲನ ಮೂಡಿಸಿದ್ದಾರೆ. ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಕಸರತ್ತು ಆರಂಭಿಸಿದೆ. ಪಕ್ಷೇತರರು ಹಾಗೂ ಕೆಜೆಪಿ ಸದಸ್ಯರನ್ನು ಸೆಳೆದುಕೊಂಡಲ್ಲಿ ಕಾಂಗ್ರೆಸ್‌ಗೂ ಅವಕಾಶ ಇದೆ. ಎರಡು ಪಕ್ಷಗಳ ಮೇಲಾಟದಲ್ಲಿ ಯಾರು ಅಧಿಕಾರ ಹಿಡಿಯುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.