ಗದಗ

ಅಧಿಕಾರದ ಗದ್ದುಗೆ ಯಾರಿಗೆ?

Published On :

ಗದಗ:  ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಪಟ್ಟಣ ಪಂಚಾಯ್ತಿಗೆ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿಯಲ್ಲಿ ಯಾರು ಅಧಿಕಾರ ನಡೆಸುತ್ತಾರೆ ಎನ್ನುವುದು ಮಾತ್ರ ಇಂದಿಗೂ ಸ್ಪಷ್ಟವಾಗಿಲ್ಲ. 17 ಸ್ಥಾನಗಳನ್ನು ಹೊಂದಿರುವ ಈ ಪಟ್ಟಣ ಪಂಚಾಯ್ತಿಯಲ್ಲಿ 8 ಬಿಜೆಪಿ, 6 ಕಾಂಗ್ರೆಸ್ ಹಾಗೂ 1 ಕೆಜೆಪಿ ಹಾಗೂ 2 ಪಕ್ಷೇತರರು ಆಯ್ಕೆಯಾಗಿದ್ದು, ಕೆಜೆಪಿ ಹಾಗೂ ಪಕ್ಷೇತರರು ಯಾವ ಕಡೆ ವಾಲುತ್ತಾರೆ ಆ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ಬಿಜೆಪಿ ತೆರೆಮರೆಯಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದ್ದರೆ, ಕಾಂಗ್ರೆಸ್ ಕೂಡಾ ಹಿಂದೆ ಬಿದ್ದಿಲ್ಲ. ಆ ಪಕ್ಷದ ನಾಯಕರು ಪಕ್ಷೇತರರೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದಾರೆ. ಯಾರು ಅಧಿಕಾರದ ಗದ್ದುಗೆ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಧಿಕಾರಕ್ಕಾಗಿ
ತೀವ್ರ ಕಸರತ್ತು
ಗದಗ: ಮೊದಲಿನಿಂದಲೂ ಶಿರಹಟ್ಟಿ ಪಟ್ಟಣದಲ್ಲಿ ಜೆಡಿಎಸ್ ತನ್ನ ಪ್ರಭಾವ ಹೊಂದಿದೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಶಿರಹಟ್ಟಿ ಪಟ್ಟಣದವರೇ ಆಗಿದ್ದು, ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. 17 ಸ್ಥಾನಗಳನ್ನು ಹೊಂದಿರುವ ಈ ಪಟ್ಟಣ ಪಂಚಾಯ್ತಿಯಲ್ಲಿ ಜೆಡಿಎಸ್ 7, ಕಾಂಗ್ರೆಸ್ 5 ಹಾಗೂ ಬಿಜೆಪಿ 3 ಮತ್ತು ಬಿಎಸ್‌ಆರ್ 1 ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಅಧಿಕಾರದ ಕನಸನ್ನು ಕಾಣುತ್ತಿರುವ ಜೆಡಿಎಸ್, ಬಿಜೆಪಿ ಮತ್ತು ಪಕ್ಷೇತರರೊಂದಿಗೆ ಸೇರಿ ಅಧಿಕಾರ ಹಿಡಿಯುವ ಸಾಧ್ಯತೆ ಕಂಡು ಬರುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಕೂಡಾ ಅಧಿಕಾರಕ್ಕೆ ಬರಲು ಎಲ್ಲ ತಂತ್ರಗಾರಿಕೆಯನ್ನು ನಡೆಸುತ್ತಿದೆ. ಕೊನೆ ಕ್ಷಣದಲ್ಲಿ ಯಾರು ಯಶಸ್ಸು ಕಾಣುವರೋ ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.