ಇಂದು ಕಾನೂನು ಸಾಕ್ಷರತಾ ಕಾರ್ಯಕ್ರಮ
ಗದಗ: ಕಾಳಿದಾಸ ಶಿಕ್ಷಣ ಸಮಿತಿ ಗದಗ, ಹಾಗೂ ಅಪ್ನಾದೇಶ ಬಳಗ ಗದಗ ಇವುಗಳ ಆಶ್ರಯದಲ್ಲಿ ನಗರದ ಕಳಸಾಪೂರ ರಸ್ತೆಯ ಬಯಲು ಆಂಜನೇಯ ದೇವಸ್ಥಾನದ ಹತ್ತಿರವಿರುವ ದೇವರಾಜ ಅರಸು ವಸತಿ ನಿಲಯದಲ್ಲಿ ಮಾ. 14ರ ಸಂಜೆ 6.30 ಗಂಟೆಗೆ ವಿದ್ಯಾರ್ಥಿಗಳಿಗೆ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಾಗೂ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ವೃತ್ತಿಪರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪಾರಿತೋಷಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎಸ್. ಆವಿನ್ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ವಹಿಸುವರು. ಪಾರಿತೋಷಕ ವಿತರಣೆಯನ್ನು ಎಸ್ಪಿ ಡಾ. ಎಸ್.ಡಿ. ಶರಣಪ್ಪ ನೆರವೇರಿಸುವರು. ಅತಿಥಿಗಳಾಗಿ ತ್ವರಿತ ನ್ಯಾಯಾಲಯದ ಪೀಠಾಧಿಕಾರಿ ಎಂ.ಎಸ್. ಪಾಟೀಲ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಉಮೇಶ ಮೂಲಿಮನಿ, ಎಸ್.ಜಿ. ಪಲ್ಲೇದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ಆರ್. ಗುಡೂರ, ಎಂ.ಎಸ್. ರಾಮೇನಹಳ್ಳಿ, ವೀರಮಲ್ಲಪ್ಪ ಪೂಜಾರ, ಎಚ್.ಎಸ್. ಪರಮೇಶ್ವರಪ್ಪ ಮುಂತಾದವರು ಉಪಸ್ಥಿತರಿರುವರು. ಎಸ್.ಕೆ. ಬೆಟಗೇರಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ನೀರು ಪೂರೈಕೆ ಮಾಹಿತಿ
ಗದಗ: ದಾಸರ ಓಣಿ, ದಖನಿ ಗಲ್ಲಿ, ದತ್ತಾತ್ರೇಯ ರೋಡ್ 2 ಭಾಗ, ರಂಗನವಾಡಾ, ಮಕಾನಗಲ್ಲಿ 3 ಭಾಗ, 1ನೇ ನಂ. ಶಾಲೆಯ ಹಿಂದಿನ ಭಾಗ, ನಾಲ್ವಾಡ ಗಲ್ಲಿ, ಮಾಬುಸಬಾನಿ ಕಟ್ಟಿ, ರಾಚೂಟೇಶ್ವರ ನಗರ, ಹಾಳದಿಬ್ಬ, ಗುರುವಾರ ನೀರು ಪೂರೈಕೆ ಮಾಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

