ಗದಗ

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 14
ಜಿಲ್ಲಾ ಮಟ್ಟದ ಅಧಿಕಾರಿಗಳು ಬಹುತೇಕ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ಸೂಕ್ತ ಮಾಹಿತಿ ನೀಡುವಲ್ಲಿ ಹಿಂದೇಟು ಹಾಕುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಜಿಲ್ಲಾ ಆಡಳಿತ ಭವನದ ಸಭಾಭವನದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ ಮಾಡಿರುವ ಕುರಿತು ಇಲಾಖೆಯ ಅಧಿಕಾರಿಗಳು ಸಭೆಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಸದಸ್ಯ ರೇವಣೆಪ್ಪ ಕೊಂಡಿಕೊಪ್ಪ ಆಗ್ರಹಿಸಿದರು. ಈ ವೇಳೆ ಉತ್ತರಿಸಲು ಬಂದ ಅಧಿಕಾರಿ ಸಮರ್ಪಕ ಮಾಹಿತಿ ನೀಡದೇ ಇರುವುದು ಹಾಗೂ ಕೊಂಡಿಕೊಪ್ಪ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ವಿತರಣೆ ಮಾಡಲಾಗಿದೆ ಎಂದು ತಿಳಿಸುತ್ತಿದ್ದಂತೆ ಸಭೆಯಲ್ಲಿ ಗೊಂದಲ ಉಂಟಾಗಿ, ಎಲ್ಲ ಸದಸ್ಯರು ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿತು. ನಂತರ ಅಧಿಕಾರಿಗೆ ನೋಟಿಸ್ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಪಂ ಸಿಇಓ ವೀರಣ್ಣ ತುರಮರಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ನಿರ್ಮಲಾ ಬರದೂರ, ಕಮಲವ್ವ ಸಜ್ಜನರ, ಸದಸ್ಯರಾದ ಅನ್ನಪೂರ್ಣಮ್ಮ ಡಬಾಲಿ, ಬಿ.ಆರ್. ಬಸವರೆಡ್ಡೇರ, ಶಾರದಾ ಹಿರೇಗೌಡರ, ಶಾಂತವ್ವ ದಂಡಿನ, ಬಸವರಾಜೇಶ್ವರಿ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಇದ್ದರು.
ಅಧಿಕಾರಿ ತರಾಟೆಗೆ: ಮುಂಡರಗಿ ತಾಲೂಕಿನ ಹಲವಾರು ಪ್ರಾಥಮಿಕ ಶಾಲೆಗಳಿಗೆ ಶುದ್ಧ ಕುಡಿವ ನೀರಿನ ಘಟಕಗಳನ್ನು ಸ್ಥಾಪಿಸದೇ ಇರುವುದು ಹಾಗೂ ಸ್ಥಾಪನೆಯಾಗಿರುವೆಡೆ ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದಕ್ಕೆ ಎಲ್ಲ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇದರ ಜವಾಬ್ದಾರಿ ಹೊತ್ತಿರುವ ಜಿಲ್ಲಾ ಪಂಚಾಯ್ತಿ ಎಂಜನಿಯರಿಂಗ್ ವಿಭಾಗದ ಅಧಿಕಾರಿ ಜಗದೀಶ ನಾಯಕ್ ಅವರನ್ನು ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ ತರಾಟೆಗೆ ತೆಗೆದುಕೊಂಡರು. ಬುಧುವಾರವಷ್ಟೇ ಜಿಲ್ಲಾ ಉಸ್ತುವಾರಿ ಸಚಿವರೂ ಜಗದೀಶ ನಾಯಕ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದ್ದು, ಇದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.