ಗದಗ

ಇಂದು ಉದ್ಘಾಟನೆ

Published On :

ಗದಗ:   ಪಂ.ಪಂಚಾಕ್ಷರಿ ಗವಾಯಿಗಳವರ ಕಲಾ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಗದಗ ನಗರದ ಹಮಾಲರ ಕಾಲೋನಿಯಲ್ಲಿ ಆಯೋಜಿಸಲಾಗಿದೆ. ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಾ. 15ರ ಸಂಜೆ 5 ಗಂಟೆಗೆ ಜರುಗಲಿದೆ. ಸಾನ್ನಿಧ್ಯವನ್ನು ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ವಹಿಸುವರು. ಉದ್ಘಾಟಕರಾಗಿ ಮಾಜಿ ಶಾಸಕ ಡಿ.ಆರ್. ಪಾಟೀಲ ಆಗಮಿಸುವರು. ಅಧ್ಯಕ್ಷತೆಯನ್ನು ಮಾಜಿ ಶಾಸಕ ಜಿ.ಎಸ್. ಪಾಟೀಲ ವಹಿಸುವರು. ಅತಿಥಿಗಳಿಗಾಗಿ ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜಸ್ವಾಮಿ ಹಿಡ್ಕಿಮಠ, ಐ.ಬಿ. ಬೆನಕೊಪ್ಪ ಮುಂತಾದವರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಶಂಕುಸ್ಥಾಪನೆ
ಗದಗ:  ಗದಗ ಶಾಸಕ ಶ್ರೀಶೈಲಪ್ಪ ಬಿದರೂರ ಮಾ. 15ರಂದು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಬೆಳಗ್ಗೆ 10 ಗಂಟೆಗೆ ಆರಾಧನಾ ಯೋಜನೆಯ ಚೆಕ್ ವಿತರಿಸುವರು. ನಂತರ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಿಸಲಾಗುವ ಹರ್ತಿ, ಕಣವಿ ಹಾಗೂ ಹೊಸೂರ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು. 3 ಗಂಟೆಗೆ ಗದಗ ಬಳಗಾನೂರ ರಸ್ತೆ ಕಾಮಗಾರಿ ಹಾಗೂ ಆಯುರ್ವೇದ ಆಸ್ಪತ್ರೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 4 ಗಂಟೆಗೆ ನಾಗಾವಿ ಗ್ರಾಮದಲ್ಲಿ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಲಾಗುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರೆಂದು ಪ್ರಕಟಣೆ ತಿಳಿಸಿದೆ.
ಇಂದು ದಿನಾಚರಣೆ
ಗದಗ: ಜಿಲ್ಲಾ ಆಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ವಾರ್ತಾ ಇಲಾಖೆ, ಗದಗ  ಆಶ್ರಯದಲ್ಲಿ ಮಾ. 15ರ ಮಧ್ಯಾಹ್ನ 12 ಗಂಟೆಗೆ ಗದುಗಿನ ಜಗದ್ಗುರು ಶಿವಾನಂದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-2013 ಏರ್ಪಡಿಸಲಾಗಿದೆ.  ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಬಿ. ದುರ್ಗಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ರಾಹಕರ ವೇದಿಕೆಯ ಸದಸ್ಯೆ ಜಿ. ಶ್ಯಾಮಲಾ ಮಾಣಿಕ್ಯಾಲರಾವ್, ಎಫ್.ಪಿ. ಲಕ್ಷ್ಮೇಶ್ವರಮಠ, ಉಪವಿಭಾಗಾಧಿಕಾರಿ ಇಸ್ಲಾವುದ್ದೀನ. ಗದ್ಯಾಳ, ಜಗದ್ಗುರು ಶಿವಾನಂದ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸದಸ್ಯ ಎಸ್.ವಿ. ಸಂಕನೂರ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

ನೀರು ಪೂರೈಕೆ ಮಾಹಿತಿ
ಗದಗ:  ನಗರದ ವೀರನಾರಾಯಣ ಗುಡಿ ಲೈನ್, ಚವ್ಹಾಣ ಮನೆ ಹಿಂದಿನ ಲೈನ್, ಗಂಜಿ ಬಸವೇಶ್ವರ ಲೈನ್, ಅಕ್ಕಿ ಅವರ ಲೈನ್, ಬಾಣದ ಲೈನ್, ಗುಳಗುಂದಿ ಲೈನ್, ಪಡಗದ ಲೈನ್, ಕಾಳಮ್ಮನ ಗುಡಿ ಲೈನ್, ಜವುಳ ಬಜಾರ್, ಮುರಳಿ ಅವರ ಲೈನ್ ಈ ಭಾಗಗಳಲ್ಲಿ ಶುಕ್ರವಾರ ನೀರು ಪೂರೈಕೆ ಮಾಡಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.