ಮಹಿಳೆಗೆ ಅಗೌರವ ವಿಷಾದನೀಯ
ಕನ್ನಡಪ್ರಭ ವಾರ್ತೆ, ಗದಗ, ಮಾ. 14
ಭಾರತೀಯ ಸಮಾಜ, ಸಂಸ್ಕೃತಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಮಹಿಳೆಯರಿಗೆ ಅವರ ಆದರ್ಶ, ಸರಳವಾದ ಗುಣಗಳು, ತತ್ವಗಳ ಆಚರಣೆ ಹಾಗೂ ತ್ಯಾಗಗಳಿಗೆ ಸೂಕ್ತ ಮಾನ್ಯತೆ ಸಿಗದೇ ಇರುವುದು ವಿಷಾದನೀಯ ಎಂದು ಜಿಲ್ಲಾ ಗ್ರಾಹಕರ ವೇದಿಕೆ ಸದಸ್ಯೆ ಜಿ. ಶ್ಯಾಮಲಾ ಮಾಣಿಕ್ಯಾಲರಾವ್ ಹೇಳಿದರು.
ಅವರು ಈಚೆಗೆ ತೋಂಟದಾರ್ಯ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ ಹಾಗೂ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ 2110ನೇ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೆಹಲಿ ಸೇರಿದಂತೆ ದೇಶದ ವಿವಿಧೆಡೆಯಲ್ಲಿ ಮಹಿಳೆಯರು, ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರದಂತಹ ಅಮಾನವೀಯ ಅಪರಾಧಗಳು ನಡೆಯುತ್ತಿರುವುದು ಇಡಿ ದೇಶದ ನಾಗರಿಕ ಸಮಾಜ ತಲೆತಗ್ಗಿಸುವ ವಿಷಯವಾಗಿದೆ. ಅಂತಹ ಅಮಾನವೀಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಸೂಕ್ತ ಕಾನೂನು ತಿದ್ದುಪಡಿ ಆಗಬೇಕಾಗಿದೆ.
ಒಟ್ಟು ಅತ್ಯಾಚಾರ ಪ್ರಕರಣಗಳಲ್ಲಿ ವಿಚಾರಣೆ ನಡೆದು ಶಿಕ್ಷೆ ವಿಧಿಸುವ ಪ್ರಕರಣಗಳು ಕೇವಲ ಶೇ. 5ರಷ್ಟು ಮಾತ್ರ ಎಂಬುದು ಬೇಸರದ ಸಂಗತಿಯಾಗಿದೆ ಎಂದರು. ಮಹಿಳೆಯರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಅರಿತು ಅಸಹಾಯಕ ಮಹಿಳೆಯರಿಗೆ ನೆರವಾಗಬೇಕು. ಅಂದಾಗ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರಲು ಸಾಧ್ಯ ಎಂದರು. ಮಹಿಳಾ ಸಾಧಕಿಯರಾದ ಡಾ. ಪ್ರೇಮಲತಾ ಹಿರೇಮಠ ಹಾಗೂ ಅಂತರ್ ರಾಷ್ಟ್ರೀಯ ವಿಜ್ಞಾನ ಮಾದರಿ ಪ್ರಶಸ್ತಿ ಪಡೆದ ಪದ್ಮಾ ಹುಂಬಿ ಅವರನ್ನು ಸತ್ಕರಿಸಿ, ಗೌರವಿಸಲಾಯಿತು. ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾನ್ನಿಧ್ಯ ವಹಿಸಿದ್ದ ತಿಕೋಟದ ಚನ್ನಮಲ್ಲಿಕಾರ್ಜುನ ಶ್ರೀಗಳು ಆಶೀರ್ವಚನ ನೀಡಿದರು. ನೇತೃತ್ವವನ್ನು ಚಡಚಣದ ಶ್ರೀಯೋಗಾನಂದ ಮಹಾಸ್ವಾಮಿಗಳು, ಬಾಲ್ಕಿ ಹಿರೇಮಠದ ಮಹಾಲಿಂಗ ಮಹಾಸ್ವಾಮಿಗಳು ವಹಿಸಿದ್ದರು. ಶೇಖಣ್ಣ ಕವಳಿಕಾಯಿ ಸ್ವಾಗತಿಸಿದರು. ಗೌರಕ್ಕ ಬಡಿಗಣ್ಣವರ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

