ಗದಗ

ಲೋಕ ಅದಾಲತ್ ಕಾರ್ಯಕ್ರಮ

Published On :

ಗದಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಈಚೆಗೆ ಆಯೋಜಿಸಲಾಗಿದ್ದ ವಿಶೇಷ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಬ್ಯಾಂಕ್‌ಗಳಿಗೆ ಸಂಬಂಧಿಸಿದ 40ಕ್ಕೂ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎಚ್. ಆವೀನ, ಜಿಲ್ಲಾ ತ್ವರಿತ ನ್ಯಾಯಾಲಯದ ಪೀಠಾಶೀನಾಧಿಕಾರಿ ಎಂ.ಎಸ್. ಪಾಟೀಲ, ಉಮೇಶ ಮೂಲಿಮನಿ, ಎಲ್.ಆರ್. ಕುರಣೆ ಹಾಗೂ ಸಂಧಾನಕಾರ ವಕೀಲರು, ಬ್ಯಾಂಕ್ ಅಧಿಕಾರಿಗಳು, ವಕೀಲರು ಮತ್ತಿತರರು ಉಪಸ್ಥಿತರಿದ್ದರು.

--
ಇಂದು ಶಿವಲಿಂಗ ದರ್ಶನ
ನರಗುಂದ:  ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ಆಶ್ರಯದಲ್ಲಿ ಶಿವರಾತ್ರಿ ನಿಮಿತ್ತ ಮಾ. 15ರ ಸಂಜೆ 5ಗಂಟೆಗೆ ಪುರಸಭೆ ಆವರಣದಲ್ಲಿ ಶಿವಲಿಂಗ ದರ್ಶನ ಹಾಗೂ 77ನೇ ತ್ರಿಮೂರ್ತಿ ಶಿವ ಜಯಂತಿ ಅಂಗವಾಗಿ ಶಿವಾನುಭೂತಿ ಪ್ರವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾನ್ನಿಧ್ಯವನ್ನು ಪಂಚಗೃಹ ಗುಡ್ಡದ ಹಿರೇಮಠದ ಸಿದ್ದಲಿಂಗ ಶ್ರೀಗಳು, ಭೈರನಹಟ್ಟಿ ದೊರಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ಕುಷ್ಟಗಿಯ ರಾಜಯೋಗಿನಿ ಬ್ರಹ್ಮಕುಮಾರಿ ಶೋಭಾ ಅಕ್ಕನವರು, ಶಾಸಕ ಸಿ.ಸಿ. ಪಾಟೀಲ, ಜಿಪಂ ಅಧ್ಯಕ್ಷ ಎಂ.ಎಸ್.ಪಾಟೀಲ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಎಸ್. ಕರಿಗೌಡರ, ಬಿಎಸ್‌ಆರ್ ಕಾಂಗ್ರೆಸ್ ಮುಖಂಡ ಡಿ.ಎಸ್. ಪಾಟೀಲ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ತಾಪಂ ಸದಸ್ಯ ವಿ.ಎನ್. ಕೊಳ್ಳಿಯವರ, ಬಿ.ಎಸ್. ಉಪ್ಪಾರ, ಚನ್ನಬಸಪ್ಪ ಕಂಠಿ, ಸಿ.ಎಚ್. ಕೋರಿ, ಬಿ.ಕೆ. ಗುಜಮಾಗಡಿ, ಶ್ರೀಧರ ರೋಖಡೆ, ಅಕ್ಬರ್ ಮುಲ್ಲಾ, ಸಂಚಾಲಕಿ ಪ್ರಭಕ್ಕನವರು ಮತ್ತಿತರರು ಭಾಗವಹಿಸುವರು.
---
ಇಂದು ಭೂಮಿ ಪೂಜಾ ಕಾರ್ಯಕ್ರಮ
ಗದಗ:  ಜಿಪಂ, ತಾಲೂಕು ಪಂಚಾಯತ್ ಗದಗ, ಗ್ರಾಪಂ ನಾಗಾವಿ ವತಿಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ನಾಗಾವಿಯಿಂದ ಕುರ್ತಕೋಟಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮವನ್ನು ಮಾ. 15ರ ಸಂಜೆ 4.30ಕ್ಕೆ ಗದಗ ತಾಲೂಕಿನ ನಾಗಾವಿಯ ರೇಣುಕಾ ದೇವಿ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ಹೊಸಳ್ಳಿ ಸಂಸ್ಥಾನಮಠದ ಅಭಿನವ ಬೂದೀಶ್ವರ ಶ್ರೀ ವಹಿಸುವರು. ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಭೂಮಿ ಪೂಜೆ ನೆರವೇರಿಸುವರು. ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಗ್ರಾಪಂ ಅಧ್ಯಕ್ಷೆ ಸುಜಾತಾ ಹಡಗಲಿ ಮುಂತಾದವರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಉದ್ಘಾಟನೆ
ಸಮಾರಂಭ
ಗದಗ:  ತಾಲೂಕಿನ ಕದಡಿ ಗ್ರಾಮದಲ್ಲಿ ಮಾ. 15ರ ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ, ಜಿಪಂ ಗದಗ, ತಾಪಂ ಗದಗ, ಗ್ರಾಮ ಪಂಚಾಯತ್ ಕದಡಿ, ಕರ್ನಾಟಕ ಆರೋಗ್ಯ ಪದ್ಧತಿ, ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರ ಆಶ್ರಯದಲ್ಲಿ ಯೋಜನೆ ಅನುಷ್ಠಾನಗೊಂಡಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಕಳಕಪ್ಪ ಬಂಡಿ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಶಾಸಕ ಸಿ.ಸಿ.ಪಾಟೀಲ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.