ಗದಗ

ಶಂಭು ಬಾವಿಹಳ್ಳಿಗೆ ಪ್ರಶಸ್ತಿ ಪ್ರದಾನ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಮಾ. 14
ರಾಜ್ಯ ಸರ್ಕಾರ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಂಸ್ಥೆ ಹಾಗೂ ವ್ಯಕ್ತಿಗೆ ಕೊಡುವ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ ಮುಂಡರಗಿಯ ಬಿಟ್ಸ್ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭು ಬಾವಿಹಳ್ಳಿ ಅವರಿಗೆ ಲಭಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಈಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಜಗದೀಶ ಶೆಟ್ಟರ್ ಅವರು ಶಂಭು ಭಾವಿಹಳ್ಳಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ಪ್ರಶಸ್ತಿ ಪ್ರದಾನ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಕಳಕಪ್ಪ ಬಂಡಿ, ಧಾರವಾಡ ಶಾಸಕಿ ಸಿಮಾ ಮಸೂತಿ, ಸಂಯುಕ್ತಾ ಬಂಡಿ, ವಿಪ ಉಪಸಭಾಪತಿ ವಿಮಲಾಗೌಡ ಇತರರು ಪಾಲ್ಗೊಂಡಿದ್ದರು.
ಮುಂಡರಗಿಯ ಬಿಟ್ಸ್ ಕಂಪ್ಯೂಟರ್ ಶಿಕ್ಷಣ ತರಬೇತಿ ಸಂಸ್ಥೆ, 1997 ರಿಂದ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಕಂಪ್ಯೂಟರ್ ತರಬೇತಿ, ವೃತ್ತಿ ತರಬೇತಿ, ಕೌಶಲ್ಯಾಭಿವೃದ್ಧಿ ತರಬೇತಿ ನಡೆಸುತ್ತ ಬಂದಿದೆ. ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯೋಗ, ಇತರೆಡೆ ಉದ್ಯೋಗ ಪಡೆದುಕೊಂಡು ಆರ್ಥಿಕ, ಸಾಮಾಜಿಕ ಉನ್ನತಿ ಹೊಂದಲು ಬಿಟ್ಸ್ ಸಂಸ್ಥೆ ಕಾರಣವಾಗಿದೆ. ಬಿಟ್ಸ್ ಸಂಸ್ಥೆ ಗ್ರಾಮೀಣ ಯುವಕ, ಯುವತಿಯರಿಗೆ ತರಬೇತಿ ಪಡೆಯಲು ಸಹಾಯಕವಾಗಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.