ಗದಗ

ಇಂದು ಕೆ.ಎಚ್.ಪಾಟೀಲ ಜಯಂತಿ

Published On :

ಗದಗ:  ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ 89ನೇ ಜಯಂತಿಯನ್ನು ಮಾ. 16ರ ಬೆಳಗ್ಗೆ 10.30ಕ್ಕೆ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ವಿವೇಕಾನಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಉದ್ಘಾಟನೆಯನ್ನು ರಾಜಸ್ಥಾನದ ರಾಜ್ಯಪಾಲ ಮಾರ್ಗರೇಟ್ ಆಳ್ವ ನೆರವೇರಿಸುವರು. ಮಾಜಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ರಾಜ್ಯ ವಿಧಾನಸಭೆಯ ಮಾಜಿ ಸಭಾಪತಿ ರಮೇಶಕುಮಾರ, ವಿಪ ಮಾಜಿ ಸದಸ್ಯ ಹಾಗೂ ವೀರಶೈವ ಮಹಾಸಭಾದ ಅಧ್ಯಕ್ಷ ಎನ್. ತಿಪ್ಪಣ್ಣ ಹಾಗೂ ಭಾರತ ಸರ್ಕಾರದ ನೆಹರೂ ಯುವ ಕೇಂದ್ರದ ಡೈರೆಕ್ಟರ್ ಜನರಲ್ ಸಲೀಂ ಅಹ್ಮದ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕ ಜಿ.ಎಸ್. ಪಾಟೀಲ, ವಿಪ ಸದಸ್ಯ ಶ್ರೀನಿವಾಸ ಮಾನೆ, ಕೆಪಿಸಿಸಿ ಸದಸ್ಯ ವಿ.ಕೆ. ಕುರಡಗಿ, ಎಚ್.ಆರ್. ನಾಯಕ, ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಘಟಕದ ಅಧ್ಯಕ್ಷ ಟಿ. ಈಶ್ವರ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಪಾಲ್ಗೊಳ್ಳಲಿದ್ದಾರೆಂದು ರವಿ ಮೂಲಿಮನಿ ಹಾಗೂ ಐ.ಎಸ್. ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.