ಟಿವಿ, ಮೊಬೈಲ್ ಬಳಕೆಗೆ ಕಡಿವಾಣ ಹಾಕಿ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಮಾ. 15
ಮಕ್ಕಳು ಟಿವಿ, ಮೊಬೈಲ್ ಬಳಸದಂತೆ ಪೋಷಕರು ಕಡಿವಾಣ ಹಾಕಬೇಕು. ಓದಿನತ್ತ ಗಮನ ಹರಿಸುವಂತೆ ಪ್ರೇರೇಪಿಸಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆ, ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಕರು ಮಾರ್ಗದರ್ಶನ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಾಸಕ ಕಳಕಪ್ಪ ಬಂಡಿ ಹೇಳಿದರು.
ಸ್ಥಳೀಯ ರೋಟರಿ ಎಜ್ಯುಕೇಶನ್ ಸೊಸೈಟಿಯ ರೋಟರಿ ಶಾಲೆಯಲ್ಲಿ ಇತ್ತೀಚೆಗೆ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡದ ಜತೆ ಇಂಗ್ಲಿಷ್ ಭಾಷೆಯ ಜ್ಞಾನವೂ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದ್ದು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಮಾಡುವ ಪ್ರತಿಯೊಂದು ಕಾರ್ಯವೂ ಯಶಸ್ಸಿನ ಮೆಟ್ಟಿಲುಗಳಾಗಿರಬೇಕು. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಆಗ ಯಶಸ್ಸು ದೊರೆಯುವುದು ಖಚಿತ ಎಂದು ಅವರು ಹೇಳಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ದೊರೆಯುವಂತಹ ನೈತಿಕ ಶಿಕ್ಷಣವನ್ನು ಪಾಲಕರು ಮನೆಯಲ್ಲಿಯೇ ಬೋಧಿಸುವಂತಾಗಬೇಕು. ಅಂದಾಗ ಮಾತ್ರ ಅವರ ಮುಂದಿನ ಶೈಕ್ಷಣಿಕ ಬದುಕು ಉತ್ತಮಗೊಂಡು ಅವರು ಸಮಾಜದಲ್ಲಿ ಒಬ್ಬ ಮಾದರಿ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯ ಎಂದು ಸಚಿವ ಬಂಡಿ ಹೇಳಿದರು.
ರೋಟರಿ ಎಜ್ಯುಕೇಶನ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮನಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸಂಸ್ಥೆ ಅಧ್ಯಕ್ಷ ಗಿರೀಶ ಕುಲಕರ್ಣಿ, ಭಾಸ್ಕರ ರಾಯಬಾಗಿ, ಜಗದೀಶ ಕನಕೇರಿ, ಬಾಬು ನಾವಡೆ, ವಿಶ್ವನಾಥಸಾ ಮೇಘರಾಜ, ಶೇಖರ ಅಂಗಡಿ, ಗಿರೀಶ ವೆರ್ಣೇಕರ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

