ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸಿ: ಪಾಟೀಲ
ರೋಣ: ಪಾಲಕರು ಮಕ್ಕಳಿಗೆ ಕೇವಲ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿದರೆ ಸಾಲದು. ನೈತಿಕ ಗುಣ, ಸಂಸ್ಕಾರ ಕಲಿಸುವುದು ಅವಶ್ಯ ಎಂದು ಮಾಜಿ ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಅವರು ಗುರುವಾರ ಸಂಜೆ ತಾಲೂಕಿನ ಹುಲ್ಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಆರ್. ಪಾಟೀಲ ಪ್ರತಿಷ್ಠಾನದಿಂದ ಉಚಿತ ಸೌರದೀಪ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನಿಯಮಿತ ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದ ಮಕ್ಕಳ ಓದಿಗೆ ತೀವ್ರ ತೊಂದರೆಯಾಗುತ್ತಿದೆ. ಇದನ್ನು ಹೋಗಲಾಡಿಸಿ ಮಕ್ಕಳಿಗೆ ಓದಲು ಅನೂಕೂಲವಾಗುವ ದಿಶೆಯಲ್ಲಿ ಎಸ್.ಆರ್. ಪಾಟೀಲ ಪ್ರತಿಷ್ಠಾನದಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರು. 1800 ವೆಚ್ಚದ ಸೌರ ವಿದ್ಯುತ್ ದೀಪವನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು. ಜಿಪಂ ಸದಸ್ಯೆ ಶಕುಂತಲಾ ಗಾಣಿಗೇರ, ಹೊಳೆಆಲೂರ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ದಶರಥ ಗಾಣಿಗೇರ, ಎಪಿಎಂಸಿ ಸದಸ್ಯ ಪರಶುರಾಮ ಅಳಗವಾಡಿ ಹಾಗೂ ಸಾನ್ನಿಧ್ಯ ವಹಿಸಿದ್ದ ನವಲಗುಂದ ಗವಿಮಠದ ಬಸವಲಿಂಗ ಶ್ರೀ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಹುಲಿಗೆವ್ವ ಹಾದಿಮನಿ ಅಧ್ಯಕ್ಷತೆ ವಹಿಸಿದ್ದರು. ಎ.ಓ. ಪಾಟೀಲ, ತಾಪಂ ಸದಸ್ಯೆ ಗಾಯತ್ರಿ ನಾಗನೂರ, ಯುಸೂಫ ಇಟಗಿ, ವಜ್ರಪ್ಪ ಚಿಕ್ಕರಡ್ಡಿ, ದೊಡ್ಡಬಸಪ್ಪ ಬರಡ್ಡಿ, ಜಿ.ಬಿ. ಹೆರಕಲ್, ಶಿವಪ್ಪ ಕೆಂದೂರ, ನೀಲವ್ವ ಮುಗಳಿ, ಜೀವನಬಿ ಕದಡಿ, ಎಚ್.ಎಫ್. ಪಾಟೀಲ, ಬಸವರಾಜ ಅವರಾದಿ, ವಿ.ಎಸ್.ಪಾಟೀಲ, ಎಚರಪ್ಪ ಬ್ಯಾಳಿ ಉಪಸ್ಥಿತರಿದ್ದರು. ರಮಾಕಾಂತ ಕಮತಗಿ ಸ್ವಾಗತಿಸಿದರು. ಬಿ.ಎಲ್. ಬ್ಯಾಳಿ ನಿರೂಪಿಸಿದರು. ಬಿ.ಎರ್. ನರೇಗಲ್ಲ ವಂದಿಸಿದರು.
--
ಸೂರಣಗಿ: ಇಂದು ಜನಸ್ಪಂದನ ಸಭೆ
ಲಕ್ಷ್ಮೇಶ್ವರ: ಸಮೀಪದ ಸೂರಣಗಿ ಗ್ರಾಮದಲ್ಲಿ ಮಾ. 16ರಂದು ಬೆಳಗ್ಗೆ 10.30ಕ್ಕೆ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಾಲೂಕಿನ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸುವರು. ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಕಂದಾಯ ಅಧಿಕಾರಿ ಎಸ್.ಎಲ್. ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

