ಗದಗ

22ರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮಾ. 15
ಪಟ್ಟಣದ ಬಿಸಿಎನ್ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರಾಜ್ಯ ಸರ್ಕಾರ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬಿಸಿಎನ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಮಾ. 22ರಿಂದ 24ರವರೆಗೆ ರಾಜ್ಯ ಮಟ್ಟದ ತಾಂತ್ರಿಕ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಸವರಾಜ ನೆಲವಗಿ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಬಿಸಿಎನ್ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಪರಿಚಯ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ವಸ್ತು ಪ್ರದರ್ಶನದಲ್ಲಿ ರಾಜ್ಯದ 100ಕ್ಕೂ ಹೆಚ್ಚು ಎಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜುಗಳ ಎಲ್ಲ ವಿಭಾಗದಿಂದ ಆಯ್ದ 1500-2000 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು ತಾವು ತಯಾರಿಸಿದ ಹೊಸ ಹೊಸ ತಾಂತ್ರಿಕ ಆವಿಷ್ಕಾರಗಳ ಕುರಿತು ವಸ್ತು ಪ್ರದರ್ಶನ ನಡೆಸಲಾಗುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಹಾಗೂ ಉದ್ದಿಮೆದಾರರು ಪಡೆದುಕೊಳ್ಳಬಹುದಾಗಿದೆ ಎಂದರು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ವೇಳೆಯಲ್ಲಿ ತಾವು ತಯಾರಿಸಿದ ಹೊಸ ವಸ್ತುಗಳನ್ನು ಜನರಿಗೆ ತೋರಿಸಿ, ಅದರಿಂದ ಸಾರ್ವಜನಿಕರು ಹೇಗೆ ಉಪಯೋಗ ಪಡೆಯಬೇಕು. ತಮ್ಮ ಉದ್ಯಮ ಅಥವಾ ಕೃಷಿಯನ್ನು ಹೇಗೆ ಸುಧಾರಿಸಿಕೊಳ್ಳಬಹುದು ಹಾಗೂ ಆರ್ಥಿಕವಾಗಿ ಹೇಗೆ ಮುಂದೆ ಬರಬಹುದು ಎನ್ನುವುದನ್ನು ತಿಳಿಸಿಕೊಡುವುದರ ಜತೆಯಲ್ಲಿ ಜನ ಸಾಮಾನ್ಯರಿಗೆ ಹಾಗೂ ಉದ್ದಿಮೆದಾರರಿಗೆ ಅನುಕೂಲವಾಗುವಂತಹ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು. ಲಕ್ಷ್ಮೇಶ್ವರ ಸುತ್ತ ಮುತ್ತಲಿನ ಗ್ರಾಮಾಂತರ ಪ್ರದೇಶದ ಜನರು ಹಾಗೂ ನಗರ ಪ್ರದೇಶದ ಜನರು ಇದರ ಸದುಪಯೋಗ ಪಡೆಯಬೇಕೆಂದರು. ಈ ಸಂದರ್ಭದಲ್ಲಿ ಬಿಸಿಎನ್ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ವೈ.ಬಿ. ಗೊಡ್ಡಮ್ಮಿಯವರ, ಉಪನ್ಯಾಸಕ ನಾಗರಾಜ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.