ಜಿಗುಪ್ಸೆ: ಸುರಕೋಡದ ಮೂವರು ಆತ್ಮಹತ್ಯೆ
ಕನ್ನಡಪ್ರಭ ವಾರ್ತೆ, ರಾಮದುರ್ಗ, ಮಾ.15
ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ, ಮಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುರೇಬಾನ ಗ್ರಾಮದ ಹೊರವಲಯದ ಶಬರಿಕೊಳ್ಳದಲ್ಲಿ ಗುರುವಾರ ರಾತ್ರಿ ನಡೆದಿದೆ.
ವಿಷ ಸೇವಿಸಿದ್ದ ಬಾಲಕ ಒದ್ದಾಡುತ್ತಿರುವುದನ್ನು ಕಂಡ ದೇವಸ್ಥಾನದ ಅರ್ಚಕರು ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿ ಬಾಲಕನನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಶುಕ್ರವಾರ ಸಾವನ್ನಪ್ಪಿದ್ದಾನೆ.
ಶುಕ್ರವಾರ ಬೆಳಗ್ಗೆ ದಂಪತಿ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಬಿ.ಪಾಂಡುರಂಗಯ್ಯ, ಪಿಎಸ್‌ಐ ಸಂಜೀವ ಬಳಿಗಾರ ಇತರರು ಭೇಟಿ ನೀಡಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡ ಆನಂದ, ಸರೋಜಾ ಅವರು ಬಾಲಕ ಶಿವಾನಂದನ ತಂದೆ, ತಾಯಿ ಎಂಬುದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನ ಸುರಕೋಡ ಗ್ರಾಮದವರು. ಹುಬ್ಬಳ್ಳಿ ರೇಲ್ವೆ ಇಲಾಖೆಯಲ್ಲಿ ಮೆಕ್ಯಾನಿಕ್‌ಆಗಿ ಆನಂದ್ ಕಾರ್ಯ ನಿರ್ವಹಿಸುತ್ತಿದ್ದರು. ಮೃತರ ಬಳಿ ಸಿಕ್ಕ ಡೆತ್‌ನೋಟ್‌ನಲ್ಲಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬರೆಯಲಾಗಿದೆ. ಮೊಬೈಲ್ ಸಂಖ್ಯೆ ಆಧರಿಸಿ ಪೊಲೀಸರು ಆನಂದ ಶಿರೋಳ ಅವರ ಮಗಳಾದ ಅಶ್ವಿನಿ ಅವರನ್ನು ಸಂಪರ್ಕಿಸಿದ್ದಾರೆ. ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

