ಗದಗ

ಮಹಿಳೆಯರು ನಾಯಕತ್ವದ ಗುಣ ಬೆಳೆಸಿಕೊಳ್ಳಿ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 15
ಮಹಿಳೆಯರು ನಾಯಕತ್ವದ ಗುಣ ಹೆಚ್ಚೆಚ್ಚು ಬೆಳೆಸಿಕೊಂಡಲ್ಲಿ ದೇಶ, ರಾಜ್ಯ ಹಾಗೂ ಕುಟುಂಬಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೆವಿಜಿ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕ ಎ.ಎ. ಉಪಾಧ್ಯಾಯ ಹೇಳಿದರು.
ಅವರು ಈಚೆಗೆ ನಗರದಲ್ಲಿರುವ ಕೆವಿಜಿ ಬ್ಯಾಂಕಿನ ಗದಗ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. ವಿಶೇಷ ಉಪನ್ಯಾಸಕಿಯಾಗಿ ಆಗಮಿಸಿದ್ದ ನ್ಯಾಯವಾದಿ ವಿಜಯಲಕ್ಷ್ಮಿ ಅಂಗಡಿ ಮಾತನಾಡಿ, ಎಲ್ಲ ರಂಗಗಳಲ್ಲಿ ಮಹಿಳೆಯರು ಸಮಾನತೆಗಾಗಿ ಹೋರಾಡುವುದು ಅನಿವಾರ್ಯವಾಗಿದೆ.
ಗಾಂಧೀಜಿಯವರು ಮಹಿಳಾ ಸ್ವಾತಂತ್ರ್ಯದ ಬಗ್ಗೆ ಕಂಡ ಕನಸು ಇನ್ನು ಕನಸಾಗಿಯೇ ಉಳಿದಿರುವುದಲ್ಲದೇ ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರಗಳ ಪ್ರಮಾಣ ಹೆಚ್ಚುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದರು. ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಲು ಸಬಲರಾಗಬೇಕು ಎಂದರು. ಪಿ.ಎ. ಮಾಕಾಪುರ ಅವರನ್ನು ಸನ್ಮಾನಿಸಲಾಯಿತು. ಶಿಲ್ಪಾ ಮುಂತಾದವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಗದಗ ಶಾಖೆಯ ಮುಖ್ಯ ವ್ಯವಸ್ಥಾಪಕ ಎಂ.ಎನ್. ಬದಾಮಿ ಹಾಗೂ ಬೇಟಗೇರಿ ಶಾಖೆಯ ಅಧಿಕಾರಿ ಕೆ.ಆರ್. ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಜಿ. ಹಿರೇಮಠ ಸ್ವಾಗತಿಸಿದರು. ಪಿ.ಎ. ಕುಲಕರ್ಣಿ ವಂದಿಸಿದರು. ಶಿಲ್ಪಾ ನಿರೂಪಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.