ಕನ್ನಡ ಕಡ್ಡಾಯಗೊಳಿಸಿ: ದಿಬ್ಬದ
ಕನ್ನಡಪ್ರಭ ವಾರ್ತೆ, ನರಗುಂದ, ಮಾ. 16
ಕನ್ನಡ ಭಾಷೆ 2 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಕನ್ನಡ ಭಾಷೆ ಬೆಳವಣಿಗೆಯಾಗಬೇಕಾದಲ್ಲಿ ಎಲ್ಲ ಇಲಾಖೆಯಲ್ಲಿ ಕನ್ನಡ ಬಳಸುವುದನ್ನು ಸರ್ಕಾರ ಕಡ್ಡಾಯವಾಗಿ ಜಾರಿಗೆ ತರಲಿ ಎಂದು ನರಗುಂದ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಮಲಕಪ್ಪ ದಿಬ್ಬದ ಹೇಳಿದರು.
ಅವರು ಶನಿವಾರ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಕಸಾಪ ಆಶ್ರಯದಲ್ಲಿ ವೀರ ಬಾಬಾಸಾಹೇಬರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 2ನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾಷೆಯ ಜತೆಗೆ ಕನ್ನಡದಲ್ಲಿ ಅಧ್ಯಯನ ಮಾಡಿದವರಿಗೆ ಸೂಕ್ತ ಉದ್ಯೋಗಗಳು ಸಿಗುವಂತಾಗಬೇಕಿದೆ ಎಂದರು.
ರೈತರ ಬಗ್ಗೆ ಕಾಳಜಿ ವಹಿಸಿ: ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು, ರಾಜಕೀಯ ಪಕ್ಷದ ನಾಯಕರು ತಮ್ಮ ಸ್ವಾರ್ಥ ಸಾಧನೆಗೆ ತಕ್ಕಂತೆ ಕಾನೂನು ಬಳಸಿಕೊಂಡು ಈ ದೇಶದ ಅನ್ನದಾತನನ್ನು ಕಣ್ಣೀರಿನಲ್ಲಿ ಕೈ ತೊಳೆಸಬೇಡಿ. ಈ ಭಾಗದಲ್ಲಿ ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ನೇಕಾರಿಕೆ ನಂಬಿಕೊಂಡ ಕುಟುಂಬಗಳು ತೊಂದರೆಯಲ್ಲಿವೆ. ಆದ್ದರಿಂದ ಇಂತಹ ಸಮಸ್ಯೆಗಳ ಬಗ್ಗೆ ಸರ್ಕಾರ ಎಚ್ಚೆತ್ತುಕೊಂಡು, ಕಳಸಾ ಬಂಡೂರಿ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ಶಿವಪ್ಪ ಕುರಿ ಮಾತನಾಡಿದರು. ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಗ್ರಾಮದ ರೇವಣಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ಕಾರ್ಯಕ್ರಮದ ಮುಖ್ಯ ವೇದಿಕೆಗೆ ಆಗಮಿಸಿತು.
ಸಾನ್ನಿಧ್ಯ ವಹಿಸಿದ್ದ ಪಂಚಗೃಹಗುಡ್ಡದ ಹಿರೇಮಠದ ಸಿದ್ಧಲಿಂಗ ಶ್ರೀಗಳು ಆಶೀರ್ವಚನ ನೀಡಿದರು. ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ಶಾಸಕ ಸಿ.ಸಿ. ಪಾಟೀಲ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಸದಸ್ಯ ವಿದ್ಯಾವತಿ ಭೂಮಣ್ಣವರ, ಗ್ರಾಪಂ ಅಧ್ಯಕ್ಷ ಶಿವರಡ್ಡಿ ತಿಮ್ಮರಡ್ಡಿ, ಶರಣು ಗೊಗೇರಿ, ಗಂಗಮ್ಮ ಪಾಟೀಲ, ಪ್ರೊ. ಎಸ್.ಬಿ. ಕುಷ್ಟಗಿ, ಸಿ.ಎಸ್. ಸಾಲೂಟಿಗಿಮಠ, ಡಾ. ಜಿ.ಬಿ. ಜಾಬಣ್ಣವರ, ಕಸಾಪ ತಾಲೂಕು ಅಧ್ಯಕ್ಷ ಪಿ.ಸಿ. ಕಲಹಾಳ, ಜಿ.ಬಿ. ಕಂಟೆಣ್ಣವರ ಮುಂತಾದವರು ಉಪಸ್ಥಿತರಿದ್ದರು. ಆರ್.ಬಿ. ಚಿನವಾಲರ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

