ಗದಗ

ಎನ್ನೆಸ್ಸೆಸ್‌ನಿಂದ ನಾಯಕತ್ವ: ಶಿಂಗ್ಟಾಲಕೇರಿ

Published On :

ಗದಗ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಹಾಗೂ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ನಗರಸಭೆ ಸದಸ್ಯ ಅನಿಲ ಶಿಂಗ್ಟಾಲಕೇರಿ ಹೇಳಿದರು.
ಸ್ಥಳೀಯ ಜ. ಪಂಚಾಕ್ಷರಿ ಗವಾಯಿಗಳವರ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಗಳಾಗಿದ್ದ ಇಮಾಮಹುಸೇನ ರೋಣದ ಮಾತನಾಡಿ, ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಞೆ ಮೂಡಿಸುತ್ತವೆ. ವಿದ್ಯಾರ್ಥಿಗಳ ಸೇವೆಯನ್ನು ಕಾಲನಿ ಜನತೆ ಪಡೆದುಕೊಂಡು ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಜಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಂ. ಕದಡಿ, ಸುಭಾಷ ಕಟಗೇರಿ, ಫಕೀರಪ್ಪ ಕಲ್ಯಾಣಿ, ಕಾಲೇಜಿನ ಪ್ರಧಾನ ಕಾರ್ಯದರ್ಶಿ ಸುರೇಶ ಬಾಳಿಕಾಯಿ, ಪ್ರೊ೤ ಎಸ್.ಎಸ್. ಶಿಲ್ಲಿಮಠ ಉಪಸ್ಥಿತರಿದ್ದರು. ಶರೀಫ ಬೆಣಕಲ್ಲ ಸ್ವಾಗತಿಸಿದರು. ಡಾ೤ ರಾಜಶೇಖರ ದಾನರೆಡ್ಡಿ ನಿರೂಪಿಸಿದರು. ದೇವಪ್ಪ ಮಜ್ಜಗಿ ವಂದಿಸಿದರು. ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.