ಗದಗ

ದಾಳಿ: ನಕಲಿ ಬಂಗಾರ ಬಿಸ್ಕೆಟ್ ವಶ

Published On :

ಗದಗ: ನಗರ ಠಾಣೆಯ ಪೊಲೀಸರು ಸಿಪಿಐ ಸಂತೋಷ ಪವಾರ್ ನೇತೃತ್ವದಲ್ಲಿ ಸೋಮವಾರ ನಗರದ ಮುಳಗುಂದ ನಾಕಾದ ಬಿಳಿ ಇರುವ ಮೋಹನ್ ವಾಳ್ವೇಕರ (ಚೀಟರ್ ಮೋನ್ಯಾ) ಮನೆ ಮೇಲೆ ದಾಳಿ ನಡೆಸಿ 21 ನಕಲಿ ಹಾಗೂ 1 ಅಸಲಿ ಬಂಗಾರದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಂಡಿರುವ ಘಟನೆ ಜರುಗಿದೆ. ಆರೋಪಿ ಮೋಹನ್ ವಾಳ್ವೇಕರ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ. ಬಂಗಾರವನ್ನು ಕೊಳ್ಳಲು ಬಂದಿದ್ದ ಆಂಧ್ರ ಮೂಲದ ನಾಲ್ವರನ್ನು ತಮ್ಮ ವಶಕ್ಕೆ ಪಡೆದಿರುವ ಪೊಲೀಸರು ಅವರಿಂದ ದೂರು ದಾಖಲಿಸಿಕೊಂಡಿದ್ದು,  ತನಿಖೆ ಕೈಗೊಂಡಿದ್ದಾರೆ. ಈ ಹಿಂದೆಯೂ ಮೋಹನ್ ವಾಳ್ವೇಕರ ಅವರಿಂದ ಈ ರೀತಿಯ ಹಲವಾರು ಪ್ರಕರಣಗಳು ನಡೆದಿದ್ದು, ಅವುಗಳಲ್ಲಿ ಕೆಲವು ಇಂದಿಗೂ ತನಿಖಾ ಹಂತದಲ್ಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದಾಳಿಯ ವೇಳೆಯಲ್ಲಿ ನಕಲಿ ನೋಟುಗಳನ್ನು ತಯಾರಿಸಲು ಬೇಕಾಗುವ ವಸ್ತುಗಳು ಸಿಕ್ಕಿವೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.