ಗದಗ

ಘಟನೆ ಆಗಬಾರದಿತ್ತು: ಯಾವಗಲ್

Published On :

ನರಗುಂದ:  ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ಶಾಸಕ ಸಿ.ಸಿ. ಪಾಟೀಲಗೆ ಗುಂಡು ತಗಲಿದ್ದು, ಈ ಘಟನೆ ಆಗಬಾರದಿತ್ತು ಎಂದು ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಆರ್. ಯಾವಗಲ್ಲ ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವುದು ವಾಡಿಕೆ. ಅದರ ಪ್ರಕಾರ ಸಿ.ಸಿ. ಪಾಟೀಲ ತೆರಳಿದ್ದು, ಅವರ ಪಕ್ಷದವರೇ ಶಾಸಕರನ್ನು ಅಸಭ್ಯವಾದ ಮಾತಿನಿಂದ ನಿಂದನೆ ಮಾಡಿ, ಗೊಂದಲ ಸೃಷ್ಟಿಸಿದ್ದಾರೆ. ಈ ಘಟನೆಯಿಂದ ಮತ್ತಷ್ಟು ಗೊಂದಲ ಹೆಚ್ಚಾಗಬಹುದು ಎನ್ನುವ ಆತಂಕದಲ್ಲಿ ಗನ್‌ಮ್ಯಾನ್ ಗನ್ ಲೋಡ್ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಶಾಸಕರಿಗೆ ತಾಗಿದೆ ಎಂದು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಆದಷ್ಟ ಬೇಗನೆ ಘಟನೆ ಕುರಿತು ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ರೀತಿ ಘಟನೆ ಜರುಗದ ಹಾಗೆ ಪೊಲೀಸ್ ಅಧಿಕಾರಿಗಳು ನೋಡಿಕೊಳ್ಳಬೇಕು. ಶಾಸಕರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.