24ರಂದು ಪರೀಕ್ಷೆ
ಗದಗ: ಮಾ. 24ರ ಬೆಳಗ್ಗೆ 11 ರಿಂದ 1.30 ರವರೆಗೆ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮಾ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯನ್ನು ಗದಗ ಜಿಲ್ಲೆಯ 5 ತಾಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈವರೆಗೂ ಪರೀಕ್ಷಾ ಪ್ರವೇಶ ಪತ್ರ ಸ್ವೀಕರಿಸದೇ ಇರುವಂತಹ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳಿಂದ ಪಡೆದು ಪರೀಕ್ಷೆಗೆ ಹಾಜರಾಗಲು ಗದಗ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ವಿದ್ಯುತ್ ವ್ಯತ್ಯಯ
ಗದಗ: 110 ಕೆವಿ ಬೆಳ್ಳಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಮಾ. 22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ 110 ಕೆವಿ ಬೆಳ್ಳಟ್ಟಿ ಉಪಕೇಂದ್ರದಿಂದ ಪೂರೈಕೆಯಾಗುವ 33 ಕೆವಿ ಹೊಳೆಇಟಗಿ, ಸೂರಣಗಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಲ್ಲ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರು ಪೂರೈಕೆಯಲ್ಲಿ ವ್ಯತ್ಯಯ
ಗದಗ: ಮಾ. 19ರ ಮಧ್ಯರಾತ್ರಿ ಕದಾಂಪುರ ಬಳಿ ಮುಖ್ಯ ಕೊಳವೆ ಒಡೆದಿದೆ. ದುರಸ್ತಿಕಾರ್ಯ ನಡೆದಿದ್ದು ಕಾರ್ಯ ಪೂರ್ಣಗೊಂಡ ಬಳಿಕ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

