ಗದಗ

ವಿದ್ಯಾರ್ಥಿಗಳ ಕಲಿಕೆಗೆ ಸೋಲಾರ್ ಲ್ಯಾಂಪ್ ಸಹಕಾರಿ

Published On :

ಗಜೇಂದ್ರಗಡ: ರಾಜ್ಯದಲ್ಲಿ ತಲೆದೋರಿರುವ ಅನಿಯಮಿತ ವಿದ್ಯುತ್ ಕಣ್ಣಾಮುಚ್ಚಾಲೆ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗಿದ್ದು, ಈ ಸಮಸ್ಯೆ ನಿವಾರಣೆಗೆ ಸೋಲಾರ್ ಲ್ಯಾಂಪ್ ಅಗತ್ಯ ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು. ಸಮೀಪದ ರಾಜೂರು ಗ್ರಾಮದಲ್ಲಿ ಎಸ್.ಆರ್. ಪಾಟೀಲ ಪ್ರತಿಷ್ಠಾನಹಾಗೂ ಆರ್.ಎಂ. ಝಡ್. ವೇರ್ ಇಂಡಿಯಾ ಸಂಸ್ಥೆಯಿಂದ ಗ್ರಾಮದ ಪ್ರಾಥಮಿಕ ಶಾಲೆಯ ನೂರಾರು ಬಡ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಉಚಿತ ಸೌರ ವಿದ್ಯುತ್ ದೀಪ ವಿತರಿಸಿ ಅವರು ಮಾತನಾಡಿದರು. ಅನಿಯಮಿತ ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿಗಳ ಪಾಡು ಹೇಳತೀರದು. ವಿದ್ಯುತ್ ಕಡಿತ ಮಾಡದೆ ಸಮರ್ಪಕ ವಿದ್ಯುತ್ ನೀಡಲಾಗುತ್ತಿದೆ ಎಂದು ಹೇಳುವ ಸರ್ಕಾರ ಮೇಲಿಂದ ಮೇಲೆ ವಿದ್ಯುತ್ ಸ್ಥಗಿತಗೊಳಿಸಿ ವಿದ್ಯಾರ್ಥಿಗಳ ಮತ್ತು ಕೂಲಿ ಕಾರ್ಮಿಕರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ. ಮಕ್ಕಳ ಕಲಿಕೆಗೆ ಸಹಕಾರಿಯಾಗಲೆಂಬ ಉದ್ದೇಶದಿಂದ ಸೌರ ವಿದ್ಯುತ್ ದೀಪಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು. ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ವೀರಣ್ಣ ಸೊನ್ನದ, ಎಂಎಸ್‌ಐಎಲ್ ಮಾಜಿ ಅಧ್ಯಕ್ಷ ವಿ.ಆರ್. ಗುಡಿಸಾಗರ ಹಂಪಣ್ಣ ಕಿನ್ನಾಳ, ಕಾಸೀಮಸಾಬ ಮುಜಾವರ, ಪ್ರಶಾಂತ ರಾಠೋಡ, ಯುಸೂಫ್ ಇಟಗಿ, ಕೊಟ್ರೇಶ ಚಿಲಕಾ, ಬಿ.ಎಂ. ಪಾಟೀಲ, ಶಶಿಧರ ಹೂಗಾರ, ಅಜಿತ ವಂದಕುದರಿ, ಇಮಾಮಸಾಬ ರೋಣದ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.