ವಿದ್ಯಾರ್ಥಿಗಳು ಪರಿಶ್ರಮದಿಂದ ಅಭ್ಯಾಸ ಮಾಡಿ: ಆರ್.ಕೆ. ಸರನಾಡಗೌಡ
ಗಜೇಂದ್ರಗಡ: ಪರೀಕ್ಷಾ ಭಯ ತೊರೆದು ಕ್ರಿಯಾಶೀಲತೆ ಜತೆಗೆ ಏಕಾಗ್ರತೆಯಿಂದ ಅಧ್ಯಯನ ಮಾಡಿದಾಗ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಪರಿಶ್ರಮದ ಅಭ್ಯಾಸಕ್ಕೆ ಮುಂದಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಆಲಮಟ್ಟಿಯ ನಿವೃತ್ತ ಪ್ರಾಚಾರ್ಯ ಆರ್.ಕೆ. ಸರನಾಡಗೌಡರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ನಡೆಸಿದ ಗಣಿತ ವಿಷಯದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟ. ಓದಿನತ್ತ ಗಮನ ಹರಿಸಿ ಅಭ್ಯಾಸ ಮಾಡಬೇಕು.
ಮಕ್ಕಳಲ್ಲಿನ ಪರೀಕ್ಷಾ ಆತಂಕ ದೂರ ಮಾಡಲು ಶಿಕ್ಷಕರು ಆತ್ಮಸ್ಥೈರ್ಯ ತುಂಬುವ ಜತೆಗೆ ಪರೀಕ್ಷಾ ವಿಧಾನ ಮನವರಿಕೆ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.
ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಸ್.ಎಫ್. ಜಾಲಿಹಾಳ ಮಾತನಾಡಿದರು.
ಪುರಸಭೆ ಸದಸ್ಯ ಷಣ್ಮುಖಪ್ಪ ಚಿಲಝರಿ, ಎಸ್ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಬಂಕದ, ಮುಖ್ಯೋಪಾಧ್ಯಾಯ ಡಿ.ಜಿ. ತಾಳೀಕೋಟಿ, ಕೆ.ಎಸ್. ರಾಜೂರ, ಕೆ.ಎಸ್. ಮುಶಿಗೇರಿ ಉಪಸ್ಥಿತರಿದದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

