ಗದಗ

ಸುದ್ದಿ ಸಂಕ್ಷೇಪ

Published On :

ಪಾಟೀಲ ಆರೋಗ್ಯಕ್ಕೆ ಪ್ರಾರ್ಥಿಸಿ ರುದ್ರಾಭಿಷೇಕ
ಹೊಳೆಆಲೂರ:
ಮೆಣಸಗಿ ಗ್ರಾಮದಲ್ಲಿ ಈಚೆಗೆ ಕಾರ್ಯಕ್ರಮದ ವೇಳೆಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನರಗುಂದ ಶಾಸಕ ಸಿ.ಸಿ. ಪಾಟೀಲರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಇಲ್ಲಿನ ಬಿಜೆಪಿ ಮುಖಂಡರು ಗುರುವಾರ ಯಚ್ಚರಸ್ವಾಮಿಗೆ ರುದ್ರಾಭಿಷೇಕ ಮಾಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಡಾ. ಡಿ.ಕೆ. ಕುಲಕರ್ಣಿ, ಎಂ.ಎನ್. ತೇಜಿಗೌಡ್ರ, ಶೇಖಪ್ಪ ತೋಟದ, ಜಗದೀಶ ಬ್ಯಾಡಗಿ, ಯಚ್ಚರಪ್ಪ ಸಂತೋಜಿ, ಮಾರುತಿ ಮಂಡಸೊಪ್ಪಿ, ಶಿವಯೋಗಿ ಕಡಬಿನಕಟ್ಟಿ, ಅಶೋಕ ಮೊರಬದ, ಪ್ರಕಾಶ ಗೌರಿಮಠ, ಮಹಾಂತೇಶ ಬ್ಯಾಡಗಿ, ದೇವೇಂದ್ರಪ್ಪ ತುಪ್ಪದ, ಶ್ರೀಶೈಲ ಹಿರೇಹಾಳ, ವೈ.ಎಂ. ಬ್ಯಾಡಗಿ, ಶಂಕರಪ್ಪ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್‌ನಿಂದ ಪ್ರಾರ್ಥನೆ
ಹೊಳೆಆಲೂರ:
ಮೆಣಸಗಿ ಗ್ರಾಮದಲ್ಲಿ ಈಚೆಗೆ ನಡೆದ ಘಟನೆಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನರಗುಂದ ಶಾಸಕ ಸಿ.ಸಿ. ಪಾಟೀಲರು ಶೀಘ್ರ ಗುಣಮುಖರಾಗುವಂತೆ ಹೊಳೆಆಲೂರ ಕಾಂಗ್ರೆಸ್ ಮುಖಂಡರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡ ಮಲ್ಲಣ್ಣ ಕೋಳೇರಿ, ಡಿ.ಎಸ್. ಶೆಲ್ಲಿಕೇರಿ, ಕೆ.ಜಿ. ಸಾಸ್ವಿಹಾಳ, ಮಲ್ಲಪ್ಪ ಸಜ್ಜನರ, ಬಸನಗೌಡ ಶಿರಗುಂಪಿ, ಫಕ್ರುಸಾಬ ಚಿಕ್ಕಮಣ್ಣೂರ ಮುಂತಾದವರು ಉಪಸ್ಥಿತರಿದ್ದರು.

ಆಸ್ಪತ್ರೆ ಸೌಲಭ್ಯ ಪಡೆಯಲು ಕರೆ
ಗದಗ:
ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಿರುವ ಆಸ್ಪತ್ರೆಗಳಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಅದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಕರೆ ನೀಡಿದರು.
ಅವರು ಈಚೆಗೆ ತಾಲೂಕಿನ ಕದಡಿ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಜಿ.ಪಂ, ತಾ.ಪಂ ಗದಗ, ಗ್ರಾ.ಪಂ. ಕದಡಿ, ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರವು ಸಾರ್ವಜನಿಕರಿಗೆ ಆಗುವ ಆರೋಗ್ಯ ಸಮಸ್ಯೆ, ಇತರೆ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಅದರಲ್ಲಿಯೂ ಬಡವರಿಗೆ ಹೊರೆಯಾಗಬಾರದು ಎಂಬ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದೆ.  ಈ ಕೇಂದ್ರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು. ಅಲ್ಲದೇ ವೈದ್ಯರು ಜನಸಾಮಾನ್ಯರಿಗೆ ಸ್ಪಂದಿಸಿ ನಿಸ್ವಾರ್ಥ ಸೇವೆ ಸಲ್ಲಿಸಿ ಚಿಕಿತ್ಸೆ ನೀಡುವಂತೆ ಸೂಚಿಸಿದರು. ವಸಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾಡನಾಡಿದರು.   ಕಾರ್ಯಕ್ರಮದಲ್ಲಿ ಕದಡಿ ಗ್ರಾಮದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ಡಾ. ಡಿ.ಬಿ. ಚೆನ್ನಶೆಟ್ಟಿ ಸ್ವಾಗತಿಸಿದರು. ಬಿ.ಬಿ.ಲಾಳಗಟ್ಟಿ ವಂದಿಸಿದರು.

ನಾಳೆ ಕಾನೂನು ಸಾಕ್ಷರತಾ ಕಾರ್ಯಕ್ರಮ
ಗದಗ:
ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ನ್ಯಾಯವಾದಿಗಳ ಸಂಘ ಗದಗ, ಕೆಎಸ್‌ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ಇವುಗಳ ಆಶ್ರಯದಲ್ಲಿ ನಗರದ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಮಾ. 23ರ ಮಧ್ಯಾಹ್ನ 2 ಗಂಟೆಗೆ ಮಧ್ಯಸ್ಥಗಾರಿಕೆ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎಚ್. ಆವಿನ ನೆರವೇರಿಸುವರು. ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಪಾಟೀಲ ವಹಿಸುವರು. ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ಆರ್. ಗುಡೂರು, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಉಮೇಶ ಮೂಲಿಮನಿ, ಎಸ್.ಕೆ. ಪಾಟೀಲ ಮುಂತಾದವರು ಆಗಮಿಸುವರು. ಕಾರ್ಯಕ್ರಮದಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆ ಕುರಿತು ಎಸ್. ಸುಶೀಲಾ ಅವರಿಂದ ಉಪನ್ಯಾಸ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀಶೈಲಕ್ಕೆ ಪಾದಯಾತ್ರೆ
ನರೇಗಲ್ಲ:
ಸ್ಥಳಿಯ ಭ್ರಮರಾಂಬ ಮಲ್ಲಿಕಾರ್ಜುನ ಪಾದಯಾತ್ರಾ ಸೇವಾ ಸಮಿತಿಯಿಂದ ಮಾ. 28ರಂದು ಪಟ್ಟಣದ ತ್ರಿಪುರಾಂತಕೇಶ್ವರ ದೇವಸ್ಥಾನದಿಂದ ಶ್ರೀಶೈಲಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಗದಗ ಜಿಲ್ಲೆಯ ಪಾದಯಾತ್ರಿಗಳು ಮಾ. 27 ರೊಳಗಾಗಿ ಮೊ. 9945583459, 9164217701  ಸಂಪರ್ಕಿಸಲು ಭ್ರಮರಾಂಬ ಮಲ್ಲಿಕಾರ್ಜುನ ಪಾದಯಾತ್ರಾ ಸೇವಾ ಸಮಿತಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.