ಗದಗ

ಅಗಡಿ ಆಸ್ಪತ್ರೆ ನಾಳೆ ಪ್ರಾರಂಭ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೆಶ್ವರ, ಮಾ. 21
ಗದಗ ಜಿಲ್ಲೆಯಲ್ಲೇ ವಿಶಿಷ್ಟವಾದ ಅಗಡಿ ಸನ್‌ರೈಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಒಳರೋಗಿ ವಿಭಾಗ ಲಕ್ಷ್ಮೇಶ್ವರದಲ್ಲಿ ಮಾ. 23ರಂದು ಪ್ರಾರಂಭವಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ಡಾ೤ ಅರುಣ ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಜನರಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಆರೋಗ್ಯ ಸಿಗಬೇಕು ಎನ್ನುವ ವೆಂಕಪ್ಪ ಅಗಡಿಯವರ ಆಸೆಯನ್ನು ಸಂಸ್ಥೆಯ ಅಧ್ಯಕ್ಷ ಹರ್ಷವರ್ಧನ ಈಡೇರಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ಸುಸಜ್ಜಿತ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತಿದೆ.
ಸದ್ಯ 30 ಹಾಸಿಗೆಗಳ ಸೌಲಭ್ಯವಿದ್ದು, ಕೆಲವೇ ದಿನಗಳಲ್ಲಿ 50 ಹಾಸಿಗೆ ಆಸ್ಪತ್ರೆಯನ್ನಾಗಿ ಮಾಡಲಾಗುವುದು. ಮುಂದೆ 300 ಹಾಸಿಗೆ ಆಸ್ಪತ್ರೆ ಮಾಡುವ ಗುರಿ ಇದೆ. ಗದಗ ಜಿಲ್ಲೆಯಲ್ಲಿ ಇಂತಹ ಸುಸಜ್ಜಿತ ಆಸ್ಪತ್ರೆ ಇರಲಿಲ್ಲ. ಈಗ ಆ ಕೊರತೆ ನೀಗುತ್ತಿರುವುದು ಸಂತಸ ತಂದಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರು ಹಾಗೂ ಸಿಬ್ಬಂದಿ ಸೇವೆ ರೋಗಿಗಳಿಗೆ ಲಭ್ಯ ಎಂದರು.
ಸುಸಜ್ಜಿತ ಹೆರಿಗೆ ಸೌಲಭ್ಯ, ಸ್ತ್ರೀರೋಗ, ಶಸ್ತ್ರ ಚಿಕಿತ್ಸೆ ಚಿಕ್ಕ ಮಕ್ಕಳ ವಿಭಾಗ, ರಕ್ತ ತಪಾಷಣೆ ವಿಭಾಗಗಳು ಮಾ. 23ರಿಂದ ಆರಂಭವಾಗಲಿವೆ. ರೇಡಿಯಾಲಾಜಿ, ಅಲ್ಟ್ರಾ ಸೌಂಡ್ ವಿಭಾಗಗಳು ಶೀಘ್ರದಲ್ಲಿ ಪ್ರಾರಂಭವಾಗಲಿವೆ. ಉಚಿತ ಅಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ವೈದ್ಯಕೀಯ ನಿರ್ದೇಶಕ ಡಾ೤ ಅಜಗಾಂಕರ, ಸ್ತ್ರೀರೋಗ ತಜ್ಞ ಡಾ೤ ಅಮಿತ್ ಗಲಗಲಿ, ನಿಶಾ ಗಲಗಲಿ, ಎಂ.ಬಿ. ಕುಲಕರ್ಣಿ, ಜೆ.ಜಿ. ಜೋಶಿ, ಶಂಕರ ಯರ್ಲಗಟ್ಟಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.