ಗದಗ

ಕರಬಸಪ್ಪಜ್ಜನ ಮಠ ಜೀರ್ಣೋದ್ಧಾರಕ್ಕೆ ಚಾಲನೆ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮಾ. 23
ಪಟ್ಟಣದ ಕರಬಸಪ್ಪಜ್ಜನ ಮಠ ಜೀರ್ಣಾವಸ್ಥೆ ತಲುಪಿದ್ದು, ಅಪೂರ್ವ ಮಠ-ಮಾನ್ಯಗಳನ್ನು ರಕ್ಷಿಸಿ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಮಠಕ್ಕೆ ಹೊಸ ಆಯಾಮ ಕಲ್ಪಿಸುವ ನಿಟ್ಟಿನಲ್ಲಿ ಪುರಸಭೆ ಆಡಳಿತ ಮಂಡಳಿ ಪ್ರಯತ್ನ ಮಾಡಬೇಕಿದೆ ಎಂದು ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶ್ರೀಗಳು ಹೇಳಿದರು.
ಶುಕ್ರವಾರ ಪಟ್ಟಣದ ಕರಬಸಪ್ಪಜ್ಜನ ಮಠದ ಪುನಶ್ಚೇತನ ಅಡಿಗಲ್ಲು ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಪ್ರಸಿದ್ಧ ಮಠಗಳಲ್ಲಿ ಒಂದಾದ ಕರಬಸಪ್ಪಜ್ಜನ ಮಠದಲ್ಲಿ ಸಾಕಷ್ಟು ಜನರು ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿದ್ದಾರೆ. ಇಂತಹ ಮಠ ಶಿಥಿಲಾವಸ್ಥೆ ತಲುಪಿರುವುದು ನೋವಿನ ಸಂಗತಿ. ಪಟ್ಟಣದ ಜನತೆಯ ಸಹಾಯ ಸಹಕಾರದಿಂದ ಮಠವನ್ನು ಜೀರ್ಣೋದ್ಧಾರ ಮಾಡಬೇಕು. ಪುರಸಭೆಯ ಆಡಳಿತ ಮಂಡಳಿ ಜವಾಬ್ದಾರಿ ವಹಿಸಬೇಕು. ಕರಬಸಪ್ಪಜ್ಜನ ಮಠಕ್ಕೆ ಹೊಸ ರೂಪ ನೀಡಲು ನಾವು ಸಂಕಲ್ಪ ಮಾಡಬೇಕು ಎಂದರು.
ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಮಾತನಾಡಿ, ಪಟ್ಟಣದ ಉಮಾ ವಿದ್ಯಾಲಯದ ಹಲವು ತರಗತಿಗಳು ಮಠದಲ್ಲಿ ನಡೆಯುತ್ತಿದ್ದು, ಇಲ್ಲಿ ನನ್ನಂತಹ ಹಲವಾರು ಜನರು ಶಿಕ್ಷಣ ಪಡೆದುಕೊಂಡು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಮಠ ಸೂಕ್ತ ರಕ್ಷಣೆ ಇಲ್ಲದೆ ಹಾಳಾಗಿದೆ. ಮಠದ ರಕ್ಷಣೆ ಹಾಗೂ ಜೀರ್ಣೋದ್ಧಾರ ಕಾರ್ಯ ಮಾಡುವಲ್ಲಿ ನಾವು ಹಿಂದೆ ಉಳಿಯುವುದಿಲ್ಲ ಎಂದರು. ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಲಿಂಬಯ್ಯ ಲಿಂಬಯ್ಯಸ್ವಾಮಿಮಠ, ಕರಬಸಯ್ಯ ಕಲ್ಮಠ, ಪುರಸಭೆ ಮಾಜಿ ಅಧ್ಯಕ್ಷೆ ಜಯಕ್ಕ ಕಳ್ಳಿ, ಎನ್.ಜಿ. ಹೊಂಬಳ, ವಿ.ಜಿ. ಪಡಗೇರಿ, ಸದಸ್ಯ ದಾದಾಪೀರ ಮುಚ್ಚಾಲೆ, ರಾಜು ಕುಂಬಿ, ಗಣೇಶ ಬೇವಿನಮರದ, ರಾಮಣ್ಣ ರಿತ್ತಿ, ಲೆಂಕೆಪ್ಪ ಸೆರಸೂರಿ, ಅನಿಲ ಮುಳಗುಂದ, ಎಂ.ಆರ್. ಪಾಟೀಲ ಮಾತನಾಡಿದರು. ಡಾ.ಜಿ.ಎಸ್. ಕೋಟಿಮಠ ನಿರೂಪಿಸಿದರು. ಗುರುಪಾದಯ್ಯ ಗಡ್ಡದೇವರಮಠ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.