ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಲಿ
ಕನ್ನಡಪ್ರಭ ವಾರ್ತೆ, ಗದಗ, ಮಾ. 23
ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಅವರ ಶ್ರೆಯೋಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಹೇಳಿದರು.
ಅವರು ಶನಿವಾರ ಬೆಟಗೇರಿಯ ಖೋಡೆ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಗದಗ-ಬೆಟಗೇರಿಯ 2012-13 ನೇ ಸಾಲಿನ ಶೈಕ್ಷಣಿಕ ವರ್ಷದ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಇಂದು ವಿದ್ಯಾರ್ಥಿಗಳು ವಿದೇಶಿ ಸಂಸ್ಕೃತಿಗೆ ಮಾರುಹೋಗುತ್ತಿರುವುದು ನೋವಿನ ಸಂಗತಿ. ವಿದ್ಯಾರ್ಥಿಗಳ ಭವಿಷ್ಯ ಕೇವಲ ಪಾಲಕರು ಹಾಗೂ ಶಿಕ್ಷಕರ ಮೇಲಿರದೇ ವಿದ್ಯಾರ್ಥಿಗಳ ಕೈಯಲ್ಲಿದೆ.
ವಿದ್ಯಾರ್ಥಿಗಳು ತಮ್ಮ ಪ್ರೌಢಾವಸ್ಥೆಯಲ್ಲಿ ಪಾಲಕರು ಹಾಗೂ ಶಿಕ್ಷಕರು ನೀಡುವ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಶಿಕ್ಷಣದಲ್ಲಿ ಯಶಸ್ಸಿನ ಶಿಖರ ತಲುಪಬೇಕು. ಆದರೆ, ಇಂದು ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಶಿಕ್ಷಣದ ಕಡೆಗೆ ಹೆಚ್ಚಿನ ಆಸಕ್ತಿ ವಹಿಸದೆ ಇರುವುದು ಬೇಸರದ ಸಂಗಂತಿ ಎಂದರು. ಆಧುನಿಕತೆ ಬೆಳೆದಂತೆ ವಿದ್ಯಾರ್ಥಿಗಳು ಹಲವು ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಯುವ ಸಮೂಹವು ಇಂತಹ ದುಶ್ಚಟಗಳಿಂದ ದೂರವಿದ್ದರೆ ಪ್ರಜ್ಞಾವಂತ, ಸದೃಢ ದೇಶ ಕಟ್ಟಲು ಸಾಧ್ಯ ಎಂದು ಹೇಳಿದರು.
ಪ್ರತಿಯೊಬ್ಬರೂ ಭವ್ಯ ಭಾರತದ ಉತ್ತಮ ಪ್ರಜೆಯಾಗಬೇಕೆಂಬುದು ಪಾಲಕರ ಹಾಗೂ ಶಿಕ್ಷಕರ ಆಶಯವಾಗಿರುತ್ತದೆ. ವಿದ್ಯಾರ್ಥಿಗಳು ಶಿಕ್ಷಕರು, ಪಾಲಕರಲ್ಲಿನ ಉತ್ತಮ ಅಂಶಗಳನ್ನು ಅರಿತುಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಬೇಕು. ಅವರವರ ಭವಿಷ್ಯ ಅವರಲ್ಲಿಯೇ ಅಡಕವಾಗಿದ್ದು, ಇದನ್ನು ತಾವೇ ಗುರುತಿಸಿಕೊಂಡು ಈ ನಾಡಿಗೆ ಸಮರ್ಪಿಸಬೇಕಾಗಿದೆ. ಆದರೆ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ.
ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಪಾಠ ಬೋಧಿಸುವರು. ಕೆಲ ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಂಡು ತಮ್ಮ ಜೀವನದಲ್ಲಿ ಯಶಸ್ವಿಯಾಗುವರು. ಆದರೆ, ಕೆಲವರು ವಿದ್ಯಾಭ್ಯಾಸದ ಕಡೆಗೆ ಗಮನ ನೀಡದೆ ಸೋಮಾರಿಗಳಾಗಿ ತಮ್ಮ ಭವಿಷ್ಯವನ್ನು ತಾವೇ ಹಾಳು ಮಾಡಿಕೊಳ್ಳುವರು. ಈ ಮಹಾವಿದ್ಯಾಲಯದಲ್ಲಿ ಉತ್ತಮ ತರಬೇತಿ ಪಡೆದ ಶಿಕ್ಷಕರಿದ್ದು, ಅವರ ಶಿಕ್ಷಣದಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತ ಸಾಧನೆ ಮಾಡಲು ಶ್ರಮಿಸಬೇಕು ಎಂದರು. ಪಾಲಕರಾದವರು ತಮ್ಮ ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವಂತೆ ತಿಳಿಸಿದರು. ಸನ್ಮಾನ ಸ್ವೀಕರಿಸಿದ ಕಾನೂನು ವಿವಿ ಧಾರವಾಡದ ಸಿಂಡಿಕೇಟ್ ಸದಸ್ಯ ಸುಧೀರಸಿಂಗ್ ಘೋರ್ಪಡೆ ಮಾತನಾಡಿದರು.
ಅಧ್ಯಕ್ಷತೆಯನ್ನು ಪ್ರಾ. ಡಾ.ಎಸ್.ಎಫ್. ಸಿದ್ನೇಕೊಪ್ಪ ವಹಿಸಿದ್ದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಪ್ರೊ. ಆರ್.ಎಲ್. ಕಲ್ಲನಗೌಡ್ರ, ಕ್ರೀಡಾ ವಿಭಾಗದ ಸಂಚಾಲಕ ಪ್ರೊ. ಆರ್.ಎಲ್. ಗುಳೇದಗುಡ್ಡ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರೊ. ಕೇಶವ ಪಿ. ಸ್ವಾಗತಿಸಿ, ನಿರೂಪಿಸಿದರು. ಬಳಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

