ಮಹಿಳಾ ಸಬಲೀಕರಣಯೋಜನೆ ಕಾರ್ಯರೂಪಕ್ಕೆ ತನ್ನಿ: ಮೇರವಾಡೆ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಮಾ. 24
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ-ಪುರುಷರೆಂಬ ಭೇದ-ಭಾವ ಸಲ್ಲದು. ಎಲ್ಲರೂ ಸಮಾನರು ಎಂಬ ಮನೋಭಾವದಿಂದ ಗೌರವಿಸಿ, ಸಾಧಕಿಯರನ್ನು ಪ್ರೋತ್ಸಾಹಿಸಿದಾಗ ಮಾತ್ರ ಮಹಿಳಾ ಸಬಲೀಕರಣ ಸಾರ್ಥಕ ಪಡೆದುಕೊಳ್ಳುತ್ತದೆ ಎಂದು ರಾಧಾ ಮೇರವಾಡೆ ಹೇಳಿದರು.
ಸ್ಥಳೀಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಗ್ರಾಹಕರ ಹಾಗೂ ಸ್ವ-ಸಹಾಯ ಸಂಘದ ವತಿಯಿಂದ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳಾ ಸಮುದಾಯದ ಸಬಲೀಕರಣಗೊಳಿಸಬೇಕೆಂಬ ಸದುದ್ದೇಶದಿಂದ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯರೂಪಕ್ಕೆ ತಂದು ಮಹಿಳೆ ಅಭಿವೃದ್ಧಿ ಹೊಂದಲು ಸಹಕರಿಸಬೇಕು ಎಂದರು.
ಬ್ಯಾಂಕ್ ಶಾಖಾ ವ್ಯವಸ್ಥಾಪಕ ವಿ.ಆರ್. ತಗಡಿಕರ ಮಾತನಾಡಿ, ಸರ್ಕಾರ ಮಹಿಳಾ ಸಮುದಾಯದ ಅಭಿವೃದ್ಧಿಗಾಗಿ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಹೈನುಗಾರಿಕೆ, ಗೃಹ ಉಪಯೋಗಿ ವಸ್ತುಗಳ ತಯಾರಿಕೆಯಂತಹ ಸ್ವಯಂ ಉದ್ಯೋಗಗಳನ್ನು ಕೈಗೊಳ್ಳಲು ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕಲ್ಪಿಸಿದೆ.
ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲಳಾಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನಕ್ಕೆ ಮುಂದಾಗುತ್ತೇವೆ ಎಂದರು.
ಎಸ್. ಜೋಷಿ, ಪ್ರವೀಣ ಸಾಸ್ವಿಹಳ್ಳಿ, ಶಿವಕುಮಾರ, ಚರಂತಿಮಠ, ಶರಣಮ್ಮ ವಾಲಿ, ದಾಕ್ಷಾಯಣಿ ಗುಂಡೆ, ನಾಗಮ್ಮ ಸೋಬಾನದ, ವಿನುತಾ ಧೂಪದ, ಶೀಲಾ ಅಬ್ಬಿಗೇರಿ, ಪುಷ್ಪಾ ಅಂಗಡಿ, ಶ್ರವಂತಿ, ಲಲಿತಾ ವಸ್ತ್ರದ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

