ಗದಗ

ಸ್ವಚ್ಛತಾ ಕಾರ್ಯಕ್ರಮ

Published On :

ಹೊಳೆಆಲೂರ: ಕಳೆದ ಹಲವಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮೀಪದ ಮೆಣಸಗಿ ಗ್ರಾಮದ ಐತಿಹಾಸಿಕ ದೇವಾಲಯಗಳ ಸ್ವಚ್ಛತಾ ಕಾರ್ಯ ಮತ್ತು ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಕ್ರಮ ಈಚೆಗೆ ಹೊಳೆಆಲೂರಿನ ಕಲ್ಮೇಶ್ವರ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ನಡೆಯಿತು. ಪರಂಪರಾಕೂಟ ಮತ್ತು ಎನ್.ಎಸ್.ಎಸ್ ಸಹಯೋಗದಲ್ಲಿ ಮಹಾವಿದ್ಯಾಲಯದ 35 ವಿದ್ಯಾರ್ಥಿಗಳ ತಂಡ ಭೇಟಿ ನೀಡಿ, ಐತಿಹಾಸಿಕ ದೇವಾಲಯಗಳ ವಾಸ್ತು ಶಿಲ್ಪಗಳ ಕುರಿತು ಮಾಹಿತಿ ಪಡೆದರಲ್ಲದೇ ದೇವಾಲಯಗಳ ಸುತ್ತಮುತ್ತಲಿನ ಮುಳ್ಳು ಕಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.  ಈ ಸಂದರ್ಭದಲ್ಲಿ ಪರಂಪರಾ ಕೂಟದ ಸಂಚಾಲಕ ಕಡಪಟ್ಟಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಅಗತ್ಯವಾಗಿದ್ದು, ಮುಂದಿನ ಪೀಳಿಗೆಗೆ ಕಲೆ, ಸಂಸ್ಕೃತಿಯನ್ನು ಉಳಿಸಿ ಕೊಡಬೇಕಾಗಿದೆ. ಮುಳ್ಳು ಕಂಟಿಗಳಿಂದ, ಮಳೆ, ಇತ್ಯಾದಿಗಳಿಂದಾಗಿ ದೇವಾಲಯಗಳು ಹಾಳಾಗಿ ಹೋಗುತ್ತಿದ್ದು, ಗ್ರಾಮದ ಸರ್ವರೂ ಇವುಗಳ ಬಗ್ಗೆ ಕಾಳಜಿ ವಹಿಸಬೇಕು. ನಮ್ಮೂರಿನ ಹಳೆಯ ದೇವಾಲಯ, ಸ್ಮಾರಕಗಳ ರಕ್ಷಣೆಗೆ ನಾವು ಬದ್ಧರಾಗಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಶಾರದಾ ಬಸವರಾಜ ಅಂಗಡಿ, ಪರಂಪರಾ ಕೂಟದ ಕಾರ್ಯದರ್ಶಿ ಡಾ. ಪ್ರಭು ಗಂಜಿಹಾಳ, ಅಧ್ಯಕ್ಷ ಪ್ರಾ. ಎಸ್.ಎಸ್. ಪಟ್ಟಣಶೆಟ್ಟಿ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಬಸವರಾಜ ಬೆಳವಟಗಿ ಸೇರಿದಂತೆ ಕರ್ನಾಟಕ ಯುವಕ ಮಂಡಳ, ಕಲ್ಮೇಶ್ವರ ಜೀರ್ಣೋದ್ಧಾರ ಸಮಿತಿ ಮಂಡಳಿಯವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.