ರೆಡ್ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ
ಗದಗ: ರಾಜ್ಯಾದ್ಯಂತ ರೆಡ್ಕ್ರಾಸ್ ಸಂಸ್ಥೆಯು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಸ್ನೇಹಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಜ. ತೋಂಟದಾರ್ಯ ಮಠದ ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು.
ಅವರು ಬುಧವಾರ ನಗರದ ಜಿಲ್ಲಾ ರೆಡ್ಕ್ರಾಸ್ ಸಂಸ್ಥೆಯ ಆವರಣದಲ್ಲಿ ಗೇಲ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಇವರಿಂದ ಗದಗ ಜಿಲ್ಲಾ ರೆಡ್ಕ್ರಾಸ್ ಸಂಸ್ಥೆಗೆ ಕೊಡಮಾಡಿದ ಅಂಬ್ಯುಲೆನ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೆಡ್ಕ್ರಾಸ್ ಸಂಸ್ಥೆಯು ಎಲ್ಲ ಜನಾಂಗದವರಿಗೂ ಮೇಲು, ಕೀಳು ಎನ್ನದೆ ಎಲ್ಲರಿಗೂ ಸಮನಾದ ಸೇವೆ ಒದಗಿಸುತ್ತಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಗಳ ಜತೆಗೆ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಮಾಡುತ್ತಿರುವ ಈ ಸಂಸ್ಥೆಯ ಕಾರ್ಯ ಇತರೇ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಂಸ್ಥೆಯು ವಿಶೇಷವಾಗಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಸಾಧನ, ಸಲಕರಣೆಗಳನ್ನು ಸರ್ಕಾರದ ಸಹಾಯದೊಂದಿಗೆ ವಿತರಿಸುತ್ತಿದೆ. ಅಲ್ಲದೇ ಯುದ್ಧದ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ಯೋಧರನ್ನು, ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಇತರೇ ಸಂಸ್ಥೆಗಳಿಗೆ ಮಾದರಿಯಾಗಿ ಕೆಲಸ ನಿರ್ವಹಿಸಿದೆ. ಈ ಸಂಸ್ಥೆಯು ಸಾರ್ವಜನಿಕರ ಸಹಾಯ, ಸಹಕಾರದೊಂದಿಗೆ ತನ್ನದೇಆದ ವಿಶಿಷ್ಟ ಸೇವೆಯನ್ನು ಅಂಗವಿಕಲರಿಗೆ, ಹಿಂದುಳಿದ ವರ್ಗಗಳ ಜನರಿಗೆ ನೀಡುತ್ತ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿರುವುದು ಸ್ವಾಗತಾರ್ಹವಾಗಿದೆ. ಸಂಸ್ಥೆಯು ಇದೇ ರೀತಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವತ್ವ ಮೆರೆಯುವ ಕೆಲಸ ನಿರ್ವಹಿಸಲಿ ಎಂದರು. ಅತಿಥಿಗಳಾಗಿ ಆಗಮಿಸಿದ್ದ ನಗರಸಭೆ ಸದಸ್ಯ ಹಾಗೂ ಸಂಸ್ಥೆಯ ಚೇರಮನ್ ಶ್ರೀನಿವಾಸ ಹುಯಿಲಗೋಳ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯು 35 ವರ್ಷಗಳಿಂದ ಇಲ್ಲಿಯವರೆಗೆ ಸಾರ್ವಜನಿಕರಿಗೆ ಉಪಯೋಗಿಯಾಗುವಂತಹ ಹಲವು ಕಾರ್ಯ ಮಾಡುತ್ತಿದೆ. 12 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟ ಈ ರೆಡ್ಕ್ರಾಸ್ ಸಂಸ್ಥೆಯು ಹಲವು ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇಂದು ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಪಡೆದಿರುವುದು ಈ ಭಾಗದ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಶ್ರಮವೇ ಪ್ರಮುಖ ಕಾರಣವಾಗಿದೆ. ಗೇಲ್ ಇಂಡಿಯಾ ಲಿಮಿಟೆಡ್ನವರು ಇಂದು ಕೊಡಮಾಡಿದ ಅಂಬ್ಯುಲೆನ್ಸ್ ಸದ್ವಿನಿಯೋಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದರು. ಗೇಲ್ ಇಂಡಿಯಾ ಸಂಸ್ಥೆಯ ಅಧಿಕಾರಿ ಪತ್ರಿ ನಾರಾಯಣರಾವ್ ಗೇಲ್ ಇಂಡಿಯಾ ಸಂಸ್ಥೆಯ ಕುರಿತು ಮಾತನಾಡಿದರು. ಕೆ.ಕೆ. ಬಾಬು, ಮನೋಹರ ಜೋಶಿ, ಎಚ್.ಕೆ. ಆನಂದ, ವಾಸಣ್ಣ ಹೆಬಸೂರ, ಅಶೋಕ ಜೈನ್, ಡಾ. ಜಿ.ಬಿ. ಪಾಟೀಲ, ದಸ್ತಗೀರಸಾಬ ದೊಡ್ಡಮನಿ, ಉಳವಪ್ಪ ಹೊಂಬಳ ಮುಂತಾದವರು ಉಪಸ್ಥಿತರಿದ್ದರು. ಡಾ. ದಿಲೀಪ್ ಹೆಮ್ಮಾಡಿ ವಿಕಲಚೇತನರಿಗೆ ವ್ಹೀಲ್ಚೇರ್ ವಿತರಿಸಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಆರ್.ಎನ್. ಗೋಡಬೋಲೆ ಸ್ವಾಗತಿಸಿದರು. ಶ್ವೇತಾ ಸುರೇಬಾನ ನಿರೂಪಿಸಿದರು. ಡಾ. ಬಿ.ಎಂ. ಆಲೂರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

