ನದಿಯಲ್ಲಿ ಮುಳುಗಿ ಯುವಕ ಸಾವು
ನರಗುಂದ: ತಾಲೂಕಿನ ಕೊಣ್ಣೂರ ಸಮೀಪ ಹರಿಯುವ ಮಲಪ್ರಭಾ ನದಿಯಲ್ಲಿ ಈಜಲು ಹೋದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ. ಮೃತನನ್ನು ನರಗುಂದ ಪಟ್ಟಣದ ನಿವಾಸಿ ವಿಶಾಲ ಆನೇಗುಂದಿ (17) ಎಂದು ಗುರುತಿಸಲಾಗಿದೆ. ಗುರುವಾರ ಹೋಳಿ ಹುಣ್ಣಿಮೆ ಅಂಗವಾಗಿ ಬಣ್ಣ ಆಡಿ, ಕೊಣ್ಣೂರ ಸಮೀಪ ಮಲಪ್ರಭಾ ನದಿಯಲ್ಲಿ ಜಳಕಕ್ಕೆ ಹೋದ ವೇಳೆ ಆಕಸ್ಮಿಕವಾಗಿ ನದಿ ಸೆಳವಿಗೆ ಸಿಕ್ಕು ಮೃತಪಟ್ಟಿದ್ದಾನೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ: 12 ಜನರಿಗೆ ಗಾಯ
ನರಗುಂದ: ನರಗುಂದ ಹಾಗೂ ಕೊಣ್ಣೂರ ಮಧ್ಯೆ ಹುಬ್ಬಳ್ಳಿ-ಸೊಲ್ಲಾಪುರ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಸಾರಿಗೆ ಸಂಸ್ಥೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ 6 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವರಿಗೆ ತಾಲೂಕು ಆರೋಗ್ಯ ಕೇಂದ್ರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ರಾಮದುರ್ಗದಿಂದ ನರಗುಂದಕ್ಕೆ ಬರುತ್ತಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದಿತ್ತು. ಗಾಯಾಳುಗಳಲ್ಲಿ ಹೆಚ್ಚಿನವರು ಬಸ್ ಪ್ರಯಾಣಿಕರೇ ಆಗಿದ್ದಾರೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರು ಪೂರೈಕೆ ಮಾಹಿತಿ
ಗದಗ: ನಗರದ ಎಸ್.ಎಂ. ಕೃಷ್ಣ ನಗರ, ಟರ್ನಲ್ ಪೇಟೆ, ಕಣವಿ ಪ್ಲಾಟ್, ಮಂಜುನಾಥ ನಗರ, ವಸಂತ್ಸಿಂಗ್ ಜಮಾದಾರ ನಗರ ಈ ಭಾಗಗಳಲ್ಲಿ ಶುಕ್ರವಾರ ತುಂಗಭದ್ರಾ ನದಿ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

