ವಿದ್ಯಾರ್ಥಿಗಳು ಸಾಹಿತ್ಯಿಕ ಒಲವು ಬೆಳೆಸಿಕೊಳ್ಳಿ: ಶಿವಪ್ಪ ಕುರಿ
ಗದಗ: ಇಂದು ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ಜಗತ್ತಿನ ಎಲ್ಲ ವಿಚಾರಗಳನ್ನು ಅರಿಯಲು ಮಕ್ಕಳು ಸಾಹಿತ್ಯಿಕ ಹಾಗೂ ನಾಡಿನ ಕುರಿತು ಒಲವು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಹೇಳಿದರು. ಅವರು ಈಚೆಗೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಶಾಂತಾಬಾಯಿ ಮಲ್ಲಪ್ಪ ಕೊರ್ಲಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಜ್ಞಾನ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಕೊರ್ಲಹಳ್ಳಿ ಮಾತನಾಡಿ, ಈ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಬೇಗನೆ ಮಂಜೂರು ಮಾಡಲು ಆಗ್ರಹಿಸಿದ ಅವರು ಆಂಗ್ಲ ಮಾಧ್ಯಮದ ಪ್ರೌಢ ವಿಭಾಗವನ್ನು ಪ್ರಾರಂಭಿಸಲು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು. ತಾಪಂ ಉಪಾಧ್ಯಕ್ಷ ಅಕ್ಕಮಹಾದೇವಿ ಹಾರೋಗೇರಿ, ಗ್ರಾಪಂ ಅಧ್ಯಕ್ಷ ಹಾಲನಗೌಡ ಅಮರಗೋಳ, ಎಸ್ಡಿಎಂಸಿ ಉಪಾಧ್ಯಕ್ಷ ನಿಂಗಪ್ಪ ನೋಟಗಾರ, ಗ್ರಾಪಂ ಸದಸ್ಯ ಅಂದಪ್ಪ ಹಾರೋಗೇರಿ, ಶ್ರೀಶೈಲಪ್ಪ ಕೊರ್ಲಹಳ್ಳಿ, ಕನಕವ್ವ ತಳವಾರ, ರವಿ ಕರಿಗಾರ, ಸಿದ್ಧಪ್ಪ ಉಪ್ಪಾರ, ವಿ.ವಿ. ನಡುವಿನಮನಿ, ಡೈಯಟ್ ಉಪನ್ಯಾಸಕ ಕೆ.ಬಿ. ಕಂಬಳಿ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಶರಣು ಗೋಗೇರಿ ಶಾಲೆಯು ನಡೆದು ಬಂದ ದಾರಿ, ಸಾಧನೆ ಕುರಿತು ವರದಿವಾಚಿಸಿಕರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

