ಉಚಿತ ಚಿಕಿತ್ಸಾ ಶಿಬಿರ
ಗದಗ: ನಗರದ ಡಿಜೆಎಂ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚಕರ್ಮ ವಿಭಾಗದಿಂದ ಚರ್ಮ ರೋಗದ (ಇಸಬು) ಕುರಿತು ವಿಶೇಷ ಚಿಕಿತ್ಸಾ ಶಿಬಿರವನ್ನು ಏ. 1ರಿಂದ 8ರ ವರೆಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವೆಗೆ ಏರ್ಪಡಿಸಲಾಗುವುದು. ರೋಗಿಗಳ ತಪಾಸಣೆ ಮಾಡಿ, ಚಿಕಿತ್ಸೆ ನೀಡಲಾಗುವುದು. ಆಸಕ್ತರು ಇದರ ಉಪಯೋಗ ಪಡೆದುಕೊಳ್ಳಬೇಕು. ಮಾಹಿತಿಗೆ ಮೊ. 944815885, 8951098729 ಸಂಪರ್ಕಿಸುವಂತೆ ವಿಭಾಗದ ಮುಖ್ಯಸ್ಥ ಡಾ ಉಮೇಶ ಪುರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ. 1ರಂದು ನಿವೃತ್ತರ ಸಭೆ
ಗದಗ: ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸಭೆಯನ್ನು ಏ. 1ರಂದು ಬೆಳಗ್ಗೆ 11 ಗಂಟೆಗೆ ಹುಡ್ಕೋ ಕಾಲನಿ ಸಚ್ಚಿದಾನಂದ ಮಠದ ಸಭಾಂಗಣದಲ್ಲಿ ಸಭೆ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಿ. ಗಾಣಿಗೇರ ವಹಿಸುವರು. ಹಿರಿಯ ನಾಗರಿಕರ ಜಿಲ್ಲಾ ಉಪಸಮಿತಿ ಅಧ್ಯಕ್ಷ ಜಿ.ಎಸ್. ಹಿರೇಮಠ ಉಪಸ್ಥಿತರಿರುವರು. ಸಭೆಯಲ್ಲಿ ನಿವೃತ್ತರ ಹಾಗೂ ಹಿರಿಯ ನಾಗರಿಕರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲಾಗುವುದು. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಹೂಗಾರ ಹಾಗೂ ರಾಜಶೇಖರ ಕರಡಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

