ಗದಗ

ಮತ ಯಾಚಿಸಿದ ಶಾಸಕ ಲಮಾಣಿ

Published On :

ಮುಂಡರಗಿ:  ಮೇ. 5 ರಂದು ಜರುಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಗುರುವಾರ ಪಟ್ಟಣದಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಅವರು ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಿ ಅಲ್ಲಿನ ವ್ಯಾಪಾರಸ್ಥರನ್ನು ಹಾಗೂ ಖರೀದಿದಾರರನ್ನು, ದಲಾಲರನ್ನು, ಹಮಾಲರನ್ನು ಭೇಟಿ ಮಾಡಿ ಮತಯಾಚಿಸಿದರು. ನಂತರ ಪಟ್ಟಣದ ಬಜಾರಕ್ಕೆ ತೆರಳಿ ಅಲ್ಲಿನ ಪ್ರತಿ ಅಂಗಡಿಗಳಿಗೆ ಭೇಟಿ ನೀಡಿ ತಮಗೆ ಮತನೀಡಿ ಆಶೀರ್ವದಿಸುವಂತೆ ಕೇಳಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಬಿಜೆಪಿ ಸರ್ಕಾರದ ಅಧಿಕಾರದ ಅವಧಿಯಲ್ಲಿ ಈ ಹಿಂದೆ ಎಂದೂ ಆಗದಿರುವಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಬಹುತೇಕ ಎಲ್ಲ ಗ್ರಾಮೀಣ ಭಾಗದ ರಸ್ತೆಗಳನ್ನು ಸುಧಾರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಆಶ್ರಯ ಮನೆಗಳು, ಸಂಧ್ಯಾಸುರಕ್ಷಾ, ವಿಧವಾ, ವೃದ್ಧಾಪ್ಯ, ಅಂಗವಿಕಲ ಮಾಶಾಸನಗಳನ್ನು ನೀಡಲಾಗಿದೆ. ಪುರಸಭೆಗೆ ಸುಮಾರು  ರು. 25 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ ಒಳಚಂರಡಿ ಯೋಜನೆಗೆ  ರು. 24 ಕೋಟಿ ತಂದಿದ್ದೇನೆ. ಮತದಾರರು ನನ್ನ ಎಲ್ಲ ಸೇವೆಯನ್ನು ಮೆಚ್ಚಿದ್ದಾರೆ. ಇದೊಂದು ಬಾರಿ ನನಗೆ ಆಶೀರ್ವಾದ ಮಾಡುವ ಮೂಲಕ ಇನ್ನುಳಿದ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿಕೊಳ್ಳಲಿದ್ದಾರೆ ಎಂದರು.   ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಬಾಬಣ್ಣ ಶಿವಶೆಟ್ಟರ್, ಶಹರ ಘಟಕದ ಬಿಜೆಪಿ ಅಧ್ಯಕ್ಷ ರಜನೀಕಾಂತ ದೇಸಾಯಿ, ಸುರೇಶ ಜೈನ್, ಆರ್.ಎಂ. ತಪ್ಪಡಿ, ಮಂಜುನಾಥ ಇಟಗಿ, ಸುರೇಶ ಮಾಳೆಕೊಪ್ಪ, ಶ್ರೀನಿವಾಸ ಅಬ್ಬೀಗೇರಿ, ಶಂಕರಗೌಡ ಪಾಟೀಲ, ಶಿವಪ್ಪ ಚಿಕ್ಕಣ್ಣವರ, ಬಸಪ್ಪ ಬನ್ನಿಕೊಪ್ಪ, ಮಂಜುನಾಥ ಕಾಗನೂರ, ಬಸವರಾಜ ಮುಂಡವಾಡ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.