ಮಕ್ಕಳ ಬೆಳವಣಿಗೆ: ಪಾಲಕರ ಪಾತ್ರ ಮಹತ್ವದ್ದು
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಮಾ. 29
ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಜತೆ ಪಾಲಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವತ್ತ ಮುಂದಾಗಿ ಎಂದು ನಿವೃತ್ತ ಉಪನ್ಯಾಸಕ ಗಾರವಾಡ ಹಿರೇಮಠ ಹೇಳಿದರು.
ಈಚೆಗೆ ಅವರು ಸ್ಥಳೀಯ ಓಂ ಸಾಯಿ ಏಜ್ಯುಕೇಶನ್ ಟ್ರಸ್ಟ್ ಆಂಡ್ ಚಾರಿಟೇಬಲ್ ಟ್ರಸ್ಟ್,ನ ಕಿಡ್ಸ್ ಕ್ಯಾಂಪಸ್ ಮಾಂಟೆಸ್ಸರಿ ಇಂಟರ್,ನ್ಯಾಷನಲ್ ಸ್ಕೂಲ್,ನಲ್ಲಿ ನಡೆದ ಶಾಲಾ ವಾರ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ನೈತಿಕ ಶಿಕ್ಷಣವನ್ನು ಪಾಲಕರು ಮನೆಯಲ್ಲಿಯೇ ಬೋಧಿಸುವಂತಾಗಬೇಕು. ಅಂದಾಗ ಮಾತ್ರ ಅವರ ಮುಂದಿನ ಶೈಕ್ಷಣಿಕ ಬದುಕು ಉತ್ತಮಗೊಂಡು ಸಮಾಜದಲ್ಲಿ ಮಾದರಿ ನಾಗರಿಕನಾಗಿ ಹೊರಹೊಮ್ಮಲು ಸಾಧ್ಯ ಎಂದರು. ಭಗವಾನ್ ಮಹಾವೀರ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಅಜೀತ ಬಾಗಮಾರ ಮಾತನಾಡಿ, ಮಕ್ಕಳಿಗೆ ಅಕ್ಷರ ಜ್ಞಾನ ನೀಡುವಲ್ಲಿ ಶಿಕ್ಷಕ ಸಮುದಾಯದ ಜತೆಗೆ ಸಮಾಜದ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಪರಿಪೂರ್ಣ ಜ್ಞಾನ ಸಂಪಾದಿಸಿ ಬೋಧನೆಯಲ್ಲಿ ತೊಡಗಿದಾಗ ಮಾತ್ರ ಮಕ್ಕಳಲ್ಲಿ ನೈತಿಕತೆಯ ಜ್ಞಾನ ಬೆಳೆಯಲು ಸಾಧ್ಯ ಎಂದರು. ಸಂಸ್ಥೆಯ ಅಧ್ಯಕ್ಷ ಆನಂದ ಮಂತ್ರಿ, ಕಾರ್ಯದರ್ಶಿ ಗಿರೀಶ ವರ್ಣೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕಿ ಶ್ವೇತಾ ಕಾರಡಗಿಮಠ, ರಾಜೇಶ್ವರಿ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

