ಗದಗ

ಗ್ರಾಮೀಣರು ಬ್ಯಾಂಕ್ ಸೌಲಭ್ಯ ಪಡೆಯಿರಿ

Published On :

ಗದಗ: ಪ್ರಸಕ್ತ ಜಾಗತೀಕರಣ ವ್ಯವಸ್ಥೆಯಲ್ಲಿ ಸಾರ್ವಜನಿಕ ಬ್ಯಾಂಕ್ ಮತ್ತು ಖಾಸಗಿ ಬ್ಯಾಂಕುಗಳ ಮಧ್ಯೆ ಪೈಪೋಟಿ ಏರ್ಪಟ್ಟಿರುವುದರ ಪರಿಣಾಮ ಅನೇಕ ರೀತಿಯ ಸೌಲಭ್ಯಗಳನ್ನು ಬ್ಯಾಂಕ್,ಗಳು ನೀಡುತ್ತಿದ್ದು, ಇವುಗಳ ಸದುಪಯೋಗವನ್ನು ಗ್ರಾಮೀಣ ಜನತೆ ಪಡೆದುಕೊಳ್ಳಬೇಕೆಂದು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಬಾಪುಗೌಡ ಅಯ್ಯಪ್ಪನವರ ಹೇಳಿದರು.
ತಾಲೂಕಿನ ಬಿಂಕದಕಟ್ಟಿಯಲ್ಲಿ ನಡೆಯುತ್ತಿರುವ ಹುಲಕೋಟಿಯ ದಿ. ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್,ಎಸ್,ಎಸ್ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಗ್ರಾಮೀಣ ಅಭಿವೃದ್ಧಿಯಲ್ಲಿ ಬ್ಯಾಂಕ್,ಗಳ ಪಾತ್ರ ವಿಷಯದ ಮೇಲೆ ಉಪನ್ಯಾಸ ನೀಡಿದರು.
ಗ್ರಾಮೀಣ ಮತ್ತು ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಷ್ಟ್ರೀಕೃತ ಬ್ಯಾಂಕ್,ಗಳು ಮತ್ತು ನಬಾರ್ಡ್,ನ ವಿವಿಧ ಯೋಜನೆಗಳ ಬಗ್ಗೆ ವಿವರಿಸಿದರು.
ಪ್ರಾಚಾರ್ಯ ಡಾ, ಶಿವಪ್ಪ ಕುರಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಬ್ಯಾಂಕುಗಳು ನೀಡುವ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಬಿಂಕದಕಟ್ಟಿ ಗ್ರಾಪಂ ಅಧ್ಯಕ್ಷ ಫಾತೀಮಾ ಸೋನೆಖಾನ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶೇಕವ್ವ ನಾನಾಪುರ, ಸಿ. ಉಷಾ, ಡಾ. ಸುಜಾತಾ ಬರದೂರು, ವನಮಾಲಾ ಖಾನಗೌಡರ, ಮಲ್ಲಿಕಾರ್ಜುನ ಅಂಗಡಿ, ಬೆಳ್ಳಿಕಟ್ಟಿ ಆಗಮಿಸಿದ್ದರು. ಎನ್ನೆಸ್ಸೆಸ್ ಅಧಿಕಾರಿ ನಾಗರಾಜ ಹಾವಿನಾಳ ಉಪಸ್ಥಿತರಿದ್ದರು. ವಾಸು ನೀರಲಕೇರಿ ಮತ್ತು ಅನಿತಾ ದಾಮೋದರ ನಿರೂಪಿಸಿದರು. ವಿಠ್ಠಲ್ ರಾಠೋಡ್ ಸ್ವಾಗತಿಸಿದರು. ವಿನಾಯಕ ಬಾಳಿಕಾಯಿ ಪುಷ್ಪಾರ್ಪಣೆ ನಡೆಸಿಕೊಟ್ಟರು. ಖೇಮವ್ವ ಲಕ್ಕುಂಡಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.